ಚಿಕ್ಕಮಗಳೂರು:ಜಿಲ್ಲೆಯಲ್ಲಿ ಇಂದು 132 ಕೊರೊನಾ ಸೋಂಕಿತ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3,744ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 222 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 2,599 ಜನ ಸೋಂಕಿತರು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮನೆಗೆ ಮರಳಿದ್ದಾರೆ.
ಚಿಕ್ಕಮಗಳೂರು ತಾಲೂಕಿನಲ್ಲಿ 47, ಕಡೂರು 31, ತರೀಕೆರೆ 31, ಮೂಡಿಗೆರೆ 13, ಶೃಂಗೇರಿ 02, ಕೊಪ್ಪ ತಾಲೂಕಿನಲ್ಲಿ 08 ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.
ಇಂದು ಸೋಂಕಿಗೆ ಮೂವರು ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 68ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3,744ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 1,077 ಸಕ್ರಿಯ ಪ್ರಕರಣಗಳಿವೆ.