ಚಿಕ್ಕಮಗಳೂರು:ಜಿಲ್ಲೆಯಲ್ಲಿ ಇಂದು 142 ಕೊರೊನಾ ಸೋಂಕಿತ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ, 10,026ಕ್ಕೆ ಏರಿಕೆಯಾಗಿದೆ.
ಇಂದು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 271 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 8,214 ಜನ ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾದಂತಾಗಿದೆ.
ಚಿಕ್ಕಮಗಳೂರು ತಾಲೂಕಿನಲ್ಲಿ 14, ಕಡೂರು ತಾಲೂಕಿನಲ್ಲಿ 21, ಮೂಡಿಗೆರೆ ತಾಲೂಕಿನಲ್ಲಿ 31, ತರೀಕೆರೆ ತಾಲ್ಲೂಕಿನಲ್ಲಿ 66, ಶೃಂಗೇರಿ ತಾಲೂಕಿನಲ್ಲಿ 02, ಕೊಪ್ಪ ತಾಲ್ಲೂಕಿನಲ್ಲಿ 08 ಸೋಂಕಿತ ಪ್ರಕರಣಗಳು ಪತ್ತೆಯಾಗಿವೆ.
ಇಂದು ಸೋಂಕಿಗೆ ಒಬ್ಬರು ಬಲಿಯಾಗಿದ್ದು, ಇಲ್ಲಿಯವರೆಗೂ 127 ಮಂದಿ ಸಾವನ್ನಪ್ಪಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10,026ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 1,414 ಸಕ್ರಿಯ ಪ್ರಕರಣಗಳಿವೆ.