ಚಿಕ್ಕಮಗಳೂರು: ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರಿನ ಆಲ್ದೂರು ಸಮೀಪದ ಬೈಗೂರು ಗ್ರಾಮದಲ್ಲಿ ನಡೆದಿದೆ.
ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು - ನೀರಿನಲ್ಲಿ ಮುಳುಗಿ ಬಾಲಕ ಸಾವು
ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದು, ಆಲ್ದೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.
![ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋಗಿದ್ದ ಬಾಲಕ ನೀರುಪಾಲು Died](https://etvbharatimages.akamaized.net/etvbharat/prod-images/768-512-12:39:27:1601881767-kn-ckm-02-death-av-7202347-05102020123626-0510f-1601881586-426.jpg)
Died
ಶರಣು (16) ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಬಾಲಕ. ಈತ ಮೂರು ಜನ ಸ್ನೇಹಿತರೊಂದಿಗೆ ಕೆರೆಯಲ್ಲಿ ಈಜಲು ಹೋದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದ್ದು, ಶರಣು ನೀರಿನಲ್ಲಿ ಮುಳುಗುತ್ತಿದ್ದಂತೆ ಆತನ ಸ್ನೇಹಿತರು ಘಟನಾ ಸ್ಥಳದಿಂದ ಪರಾರಿಯಾಗಿದ್ದಾರೆ.
ಈ ಕುರಿತು ಆಲ್ದೂರು ಪೊಲೀಸ್ ಠಾಣಾ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ, ಮೃತದೇಹವನ್ನು ಕೆರೆಯಿಂದ ಹೊರ ತೆಗೆದಿದ್ದು, ಆಲ್ದೂರು ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.