ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಲ್ಲಿ ಬರೋಬ್ಬರಿ 17 ಜನರಿಗೆ ಕೊರೊನಾ ಸೋಂಕು ದೃಢ - ತರೀಕೆರೆ ತಾಲೂಕಿನ ಅಜ್ಜಂಪುರ

ಇಂದು 8 ಮಂದಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ 35 ಜನ ಸೋಂಕಿತರು, ಜಿಲ್ಲಾ ಕೋವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

17 new coronavirus cases reported in Chikkamagaur today
ಚಿಕ್ಕಮಗಳೂರಲ್ಲಿ ಬರೋಬ್ಬರಿ 17 ಜನರಿಗೆ ಕೊರೊನಾ ಸೋಂಕು ದೃಢ

By

Published : Jun 29, 2020, 11:15 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು ಬರೋಬ್ಬರಿ 17 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 70ಕ್ಕೆ ಏರಿಕೆಯಾಗಿದೆ.

ಅಲ್ಲದೆ ಇಂದು 8 ಮಂದಿ ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ 35 ಜನ ಸೋಂಕಿತರು, ಜಿಲ್ಲಾ ಕೋವಿಡ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಚಿಕ್ಕಮಗಳೂರಲ್ಲಿ ಬರೋಬ್ಬರಿ 17 ಜನರಿಗೆ ಕೊರೊನಾ ಸೋಂಕು ದೃಢ

ತರೀಕೆರೆ ತಾಲೂಕಿನ ಅಜ್ಜಂಪುರ ಮೂಲದ, ಓರ್ವ ವಯೋವೃದ್ಧೆ ಕೊರೊನಾ ವೈರಸ್​​ಗೆ ತುತ್ತಾಗಿ ಸಾವನ್ನಪ್ಪಿದ್ದಾರೆ.

ಇಂದು ಮತ್ತೆ 17 ಕೊರೊನಾ ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 31 ವರ್ಷದ ಪುರುಷ, 52 ವರ್ಷದ ಪುರುಷ, 26 ವರ್ಷದ ಪುರುಷ, 47 ವರ್ಷದ ಮಹಿಳೆ, 23 ವರ್ಷದ ಯುವತಿ, 29 ವರ್ಷದ ಪುರುಷ, 34 ವರ್ಷದ ಮಹಿಳೆ, 40 ವರ್ಷದ ಮಹಿಳೆ, 15 ವರ್ಷದ ಯುವಕ, 50 ವರ್ಷದ ಪುರುಷ, 44 ವರ್ಷದ ಮಹಿಳೆ, 20 ವರ್ಷದ ಯುವತಿ, 35 ವರ್ಷದ ಪುರುಷ, 30 ವರ್ಷದ ಪುರುಷ, 46 ವರ್ಷದ ಪುರುಷ, 55 ವರ್ಷದ ಮಹಿಳೆ, 42 ವರ್ಷದ ಪುರುಷ, ಇವರಲ್ಲಿ ಈ ಕೊರೊನಾ ಸೋಂಕು ಪತ್ತೆಯಾಗಿದೆ.

ಈ 17 ಜನರಲ್ಲಿ ಚಿಕ್ಕಮಗಳೂರು ತಾಲೂಕಿಗೆ ಇಬ್ಬರು ಸೇರಿದ್ದರೇ, ಕಡೂರು ತಾಲೂಕಿನವರು ಒಬ್ಬರಿದ್ದಾರೆ. ತರೀಕೆರೆ ತಾಲೂಕಿನಲ್ಲಿ ಒಟ್ಟು 14 ಜನರಲ್ಲಿ ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಈ ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾವನ್ನು ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸೀಲ್​​ಡೌನ್ ಮಾಡಿ, ಕಟ್ಟೆಚ್ಚರ ವಹಿಸಿದೆ.

ಜಿಲ್ಲಾ ಆರೋಗ್ಯ ಇಲಾಖೆ ಈ 17 ಜನರ ಜೊತೆ ಪ್ರಾರ್ಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದ ಜನರನ್ನು ಹುಡುಕುವ ಶೋಧ ಕಾರ್ಯ ಪ್ರಾರಂಭ ಮಾಡಿದ್ದು, ಈ 17 ಕೊರೊನಾ ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಜಿಲ್ಲೆಯಲ್ಲಿ ಒಟ್ಟು 34 ಸಕ್ರಿಯ ಪ್ರಕರಣಗಳಿವೆ.

ABOUT THE AUTHOR

...view details