ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು ಜಿಲ್ಲೆಯಲ್ಲಿಂದು 173 ಜನರಲ್ಲಿ ಕೊರೊನಾ ಸೋಂಕು ಪತ್ತೆ :103 ಮಂದಿ ಗುಣಮುಖ - Chikkamagaluru corona latest news

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು ಕಂಡು ಬಂದಿರುವ ಕೊರೊನಾ ಪ್ರಕರಣಗಳ ಮಾಹಿತಿ ಇಲ್ಲಿದೆ.

Chikkamagaluru
Chikkamagaluru

By

Published : Sep 13, 2020, 7:03 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಈ ದಿನ 173 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 6 ಸಾವಿರದ ಗಡಿ ದಾಟಿದೆ.

ಇಂದಿನ ಕೊರೊನಾ ವಿವರ:

ಚಿಕ್ಕಮಗಳೂರು ತಾಲೂಕಿನಲ್ಲಿ 62, ಕಡೂರು ತಾಲೂಕಿನಲ್ಲಿ 46, ತರೀಕೆರೆ ತಾಲೂಕಿನಲ್ಲಿ 35, ಮೂಡಿಗೆರೆ ತಾಲೂಕಿನಲ್ಲಿ 21, ಶೃಂಗೇರಿ ತಾಲೂಕಿನಲ್ಲಿ 03, ಕೊಪ್ಪ ತಾಲೂಕಿನಲ್ಲಿ 04,ಎನ್ ಆರ್ ಪುರ ತಾಲೂಕಿನಲ್ಲಿ 02, ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,066 ಕ್ಕೆ ಏರಿಕೆಯಾಗಿದೆ.

ಮೃತರ ಮಾಹಿತಿ:

ಈ ದಿನ ಈ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 100 ಕ್ಕೆ ಏರಿಕೆಯಾಗಿದೆ.

ಗುಣಮುಖ:

ಜಿಲ್ಲೆಯಲ್ಲಿ ಈ ದಿನ ಸೋಂಕಿನಿಂದ 103 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೆ ಒಟ್ಟು 4,561 ಜನ ಸೋಂಕಿತರು, ಜಿಲ್ಲಾ ಕೋವೀಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣಮುಖರಾಗಿ ಬಿಡುಗಡೆಯಾದಂತೆ ಆಗಿದೆ. ಜಿಲ್ಲೆಯಲ್ಲಿ ಒಟ್ಟು 1,405 ಸಕ್ರಿಯ ಪ್ರಕರಣಗಳಿವೆ.

ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ.

ABOUT THE AUTHOR

...view details