ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಲ್ಲಿ 210 ಮಂದಿಗೆ ಕೊರೊನಾ ದೃಢ: ಇಬ್ಬರು ಬಲಿ - Chikkamagaluru Corona case

ಇಂದು ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದು, 210 ಜನರಲ್ಲಿ ಸೋಂಕು ದೃಢವಾಗಿದೆ. ಅಲ್ಲದೆ ಜಿಲ್ಲೆಯಲ್ಲಿ ಒಟ್ಟು 1,328 ಸಕ್ರಿಯ ಪ್ರಕರಣಗಳಿವೆ.

210 New corona cases reported in Chikkamagalore today
ಚಿಕ್ಕಮಗಳೂರಲ್ಲಿಂದು 210 ಮಂದಿಗೆ ಕೊರೊನಾ ದೃಢ: ಇಬ್ಬರು ಬಲಿ

By

Published : Sep 1, 2020, 7:59 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿಂದು 210 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದ್ದು, ಈ ಮೂಲಕ ಜಿಲ್ಲೆಯಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 4,261ಕ್ಕೆ ಏರಿಕೆಯಾಗಿದೆ.

ಅಲ್ಲದೆ ಇಂದು ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 67 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 2,859 ಮಂದಿ ಸೋಂಕಿತರು ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಚಿಕ್ಕಮಗಳೂರು ತಾಲೂಕಿನಲ್ಲಿ 60, ಕಡೂರು ತಾಲೂಕಿನಲ್ಲಿ 35, ತರೀಕೆರೆ ತಾಲೂಕಿನಲ್ಲಿ 71, ಮೂಡಿಗೆರೆ 16, ಶೃಂಗೇರಿ 01, ಕೊಪ್ಪ ತಾಲೂಕಿನಲ್ಲಿ 11, ಎನ್ ಆರ್ ಪುರ 16 ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ.

ಈ ನಡುವೆ ಸೋಂಕಿಗೆ ಇಬ್ಬರು ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ 74 ಮಂದಿ ಮೃತಪಟ್ಟಂತಾಗಿದೆ. ಇಂದು ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್​​​ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ.

ABOUT THE AUTHOR

...view details