ಚಿಕ್ಕಮಗಳೂರು:ಸರ್ಕಾರದ ಆದೇಶದ ನಡುವೆಯೂ ಸಾವಿನ ಮನೆಗೆ ತೆರಳಿದ್ದ 30 ಮಂದಿ ಪ್ರಾಥಮಿಕ ಸಂಪರ್ಕಿತರಿಗೆ ಕೊರೊನಾ ತಪಾಸಣೆ ನಡೆಸಲಾಗಿದೆ. ಈ ವೇಳೆ 30 ಜನರಲ್ಲಿ 22 ಜನರಿಗೆ ಮಂದಿಗೆ ಸೋಂಕು ದೃಢಪಟ್ಟಿದೆ. ಚಿಕ್ಕಮಗಳೂರು ತಾಲೂಕಿನ ಕೋಡಿಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಸಾವಿನ ಮನೆಗೆ ತೆರಳಿದ್ದ 22 ಜನರಿಗೆ ಕೊರೊನಾ: ಮನೆಯಿಂದ ಹೊರ ಬಾರದಂತೆ ಸೂಚನೆ ಸದ್ಯ ಗ್ರಾಮದ ಜನ ಮನೆಯಿಂದ ಹೊರ ಬಾರದಂತೆ ಸೂಚನೆ ನೀಡಲಾಗಿದೆ. ಸ್ಥಳಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮನೆ ಮನೆಗೆ ಪಡಿತರ ವಿತರಿಸುವಂತೆ ಚಿಕ್ಕಮಗಳೂರು ತಹಶೀಲ್ದಾರ್ ಆದೇಶಿಸಿದ್ದಾರೆ.
ಕೋವಿಡ್ಗೆ 22ರ ಯುವಕ ಬಲಿ:
ಮಹಾಮಾರಿ ಕೊರೊನಾಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ 22ರ ಯುವಕ ಬಲಿಯಾಗಿದ್ದಾನೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಗೌತಳ್ಳಿಯ ಶ್ರೇಯಸ್ (22) ಮೃತ ದುರ್ದೈವಿ. ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಶಿವಗಿರಿ ಸೇವಕರ ತಂಡದಿಂದ ಯುವಕನ ಅಂತ್ಯ ಸಂಸ್ಕಾರ ನೆರವೇರಿಸಲಾಗಿದೆ.
ಓದಿ:ಬೆಂಗಳೂರು ಸೇರಿದಂತೆ ರಾಜ್ಯದ 13 ಜಿಲ್ಲೆಗಳಲ್ಲಿ ಗುಣಮುಖರಾದವರ ಸಂಖ್ಯೆಯಲ್ಲಿ ಹೆಚ್ಚಳ