ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು; 23 ಜನರಲ್ಲಿಂದು ಸೋಂಕು ದೃಢ.. ಸೋಂಕಿತರ ಸಂಖ್ಯೆ123ಕ್ಕೆ ಏರಿಕೆ - ಚಿಕ್ಕಮಗಳೂರು ಕೊರೊನಾ ನ್ಯೂಸ್

ಇಂದು 23 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 123ಕ್ಕೆ ಏರಿಕೆಯಾಗಿದೆ. 123 ಸೋಂಕಿತರ ಪೈಕಿ ಸದ್ಯ ಜಿಲ್ಲೆಯ 54 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.

Chickmagaluru corona case
Chickmagaluru corona case

By

Published : Jul 8, 2020, 11:45 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 23 ಜನರಲ್ಲಿ ಸೋಂಕು ದೃಢಪಟ್ಟಿದ್ದು, ಸೋಂಕಿತರ ಸಂಖ್ಯೆ 123ಕ್ಕೆ ಏರಿಕೆಯಾಗಿದೆ.

ಇಂದು 16 ಜನರು ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೆ ಒಟ್ಟು 67 ಜನರು ಬಿಡುಗಡೆಯಾಗಿದ್ದಾರೆ. ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.

ಇಂದು 23 ಜನರಲ್ಲಿ ಈ ಸೋಂಕು ಪತ್ತೆಯಾಗಿದ್ದು, 12 ಜನರು ಚಿಕ್ಕಮಗಳೂರು ತಾಲೂಕಿಗೆ ಸೇರಿದವರಾಗಿದ್ದಾರೆ. ಕೊಪ್ಪ ತಾಲೂಕಿನಲ್ಲಿ ಒಬ್ಬರಿಗೆ, ಕಡೂರು ತಾಲೂಕಿನ 8 ಜನರು, ಎನ್ ಆರ್ ಪುರ ದಲ್ಲಿ ಒಬ್ಬರಿಗೆ, ಅಜ್ಜಂಪುರದಲ್ಲಿ ಒಬ್ಬರಿಗೆ ಸೋಂಕು ತಗುಲಿದೆ. ಸದ್ಯ ಈ ಸೋಂಕಿತರು ವಾಸ ಮಾಡುತ್ತಿದ್ದ ಏರಿಯಾವನ್ನು ಪೊಲೀಸರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದ್ದಾರೆ.

ಜಿಲ್ಲಾ ಆರೋಗ್ಯ ಇಲಾಖೆ ಈ ಸೋಂಕಿತರ ಜೊತೆ ಪ್ರಾರ್ಥಮಿಕ ಹಾಗೂ ದ್ವಿತೀಯ ಸಂಪರ್ಕ ಹೊಂದಿದ್ದ ಜನರನ್ನು ಹುಡುಕುವ ಶೋಧ ಕಾರ್ಯ ಪ್ರಾರಂಭ ಮಾಡಿದ್ದು, ಈ ಕೊರೊನಾ ಸೋಂಕಿತರನ್ನು ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡುತ್ತಿದ್ದಾರೆ. ಸದ್ಯ ಜಿಲ್ಲೆಯ 54 ಸಕ್ರಿಯ ಪ್ರಕರಣಗಳಿಗೆ ಚಿಕಿತ್ಸೆ ಮುಂದುವರೆದಿದೆ.

ABOUT THE AUTHOR

...view details