ಚಿಕ್ಕಮಗಳೂರು : ಜಿಲ್ಲೆಯಲ್ಲಿ ಇಂದು 41 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1087ಕ್ಕೆ ಏರಿಕೆಯಾಗಿದೆ.
ಈ ದಿನ ಜಿಲ್ಲಾ ಕೋವಿಡ್-19 ಆಸ್ಪತ್ರೆಯಿಂದ 11 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಈವರೆಗೂ ಜಿಲ್ಲೆಯಲ್ಲಿ ಒಟ್ಟು 451 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾದಂತಾಗಿದೆ. ಚಿಕ್ಕಮಗಳೂರು ತಾಲೂಕಿನಲ್ಲಿ 30, ಕಡೂರು 4, ತರೀಕೆರೆ 5, ಮೂಡಿಗೆರೆ 1, ಅಜ್ಜಂಪುರದಲ್ಲಿ ಒಬ್ಬ ಸೋಂಕಿತ ಪತ್ತೆಯಾಗಿದ್ದಾರೆ.