ಕರ್ನಾಟಕ

karnataka

ETV Bharat / state

ಶೃಂಗೇರಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಪ್ರಕರಣ: ಮತ್ತೆ ಐವರು ಆರೋಪಿಗಳು ಅರೆಸ್ಟ್​! - ಶೃಂಗೇರಿ ಪೊಲೀಸ್ ಠಾಣೆ

ಶೃಂಗೇರಿಯಲ್ಲಿ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಐವರನ್ನು ಬಂಧಿಸಲಾಗಿದ್ದು, ಒಟ್ಟು ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

5 accused  arrest for girl rape case
ಶೃಂಗೇರಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಚಾರ ಪ್ರಕರಣ: ಮತ್ತೆ ಐವರು ಆರೋಪಿಗಳು ಅರೆಸ್ಟ್​!

By

Published : Feb 9, 2021, 2:33 PM IST

ಚಿಕ್ಕಮಗಳೂರು:ಜಿಲ್ಲೆಯ ಶೃಂಗೇರಿಯಲ್ಲಿ ನಡೆದ ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ 5 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಪ್ರಸನ್ನ, ಅಭಿ, ವೆಂಕಟೇಶ್, ಸಾಗರ್, ಸುಗಮ್ ಬಂಧಿತ ಆರೋಪಿಗಳು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬಾಲಕಿಯ ಚಿಕ್ಕಮ್ಮ ಸೇರಿದಂತೆ 8 ಜನರನ್ನು ಶೃಂಗೇರಿ ಪೊಲೀಸರು ಬಂಧಿಸಿದ್ದರು. ಇದೀಗ ಮತ್ತೆ 5 ಮಂದಿಯನ್ನು ಬಂಧಿಸಿದ್ದು, ಒಟ್ಟು ಬಂಧಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಕಳೆದ ನಾಲ್ಕು ತಿಂಗಳಲ್ಲಿ ಬಾಲಕಿಯ ಮೇಲೆ ಸುಮಾರು 30 ಮಂದಿ ಅತ್ಯಾಚಾರ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ಪೈಕಿ ಬಾಲಕಿ ಕೆಲವರ ಹೆಸರು ತಿಳಿಸಿದ್ದು, 17 ಮಂದಿಯ ವಿರುದ್ಧ ಶೃಂಗೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾಲಕಿಯನ್ನು ಚಿಕ್ಕಮಗಳೂರಿನ ಜಿಲ್ಲಾ ಮಕ್ಕಳ ರಕ್ಷಣಾ ಘಟಕದಲ್ಲಿ ಆರೈಕೆ ಮಾಡಲಾಗುತ್ತಿದೆ.

ABOUT THE AUTHOR

...view details