ಚಿಕ್ಕಮಗಳೂರು: ಜಿಲ್ಲೆಯಲ್ಲಿ ಇಂದು 63 ಜನರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1196ಕ್ಕೆ ಏರಿಕೆಯಾಗಿದೆ.
ಚಿಕ್ಕಮಗಳೂರಿನಲ್ಲಿಂದು 63 ಜನರಲ್ಲಿ ಸೋಂಕು ಪತ್ತೆ: ಇಬ್ಬರು ಸಾವು - Chikmagalur corona news
ಕಾಫಿನಾಡಿನಲ್ಲಿಂದು 63 ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಇಬ್ಬರು ಸೋಂಕಿಗೆ ಬಲಿಯಾಗಿದ್ದಾರೆ.ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ 23 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಜಿಲ್ಲಾ ಕೋವಿಡ್ ಆಸ್ಪತ್ರೆಯಿಂದ 23 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಒಟ್ಟು 527 ಸೋಂಕಿತರು ಗುಣಮುಖರಾಗಿದ್ದಾರೆ. ಚಿಕ್ಕಮಗಳೂರು ತಾಲೂಕಿನಲ್ಲಿ 17, ಕಡೂರು ತಾಲೂಕಿನಲ್ಲಿ 23, ತರೀಕೆರೆ ತಾಲೂಕಿನಲ್ಲಿ 14, ಮೂಡಿಗೆರೆ ತಾಲೂಕಿನಲ್ಲಿ 06, ಶೃಂಗೇರಿ ತಾಲೂಕಿನಲ್ಲಿ 02, ಅಜ್ಜಂಪುರದಲ್ಲಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಇಂದು ಸೋಂಕಿಗೆ ಇಬ್ಬರು ಸಾವನ್ನಪ್ಪಿದ್ದು, ಮೃತರ ಸಂಖ್ಯೆ 24 ಕ್ಕೆ ಏರಿಕೆಯಾಗಿದೆ.
ಈ ದಿನ ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ, ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1196 ಕ್ಕೆ ಏರಿಕೆಯಾಗಿದ್ದು, ಒಟ್ಟು 645 ಸಕ್ರಿಯ ಪ್ರಕರಣಗಳಿವೆ.