ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 92 ಮಂದಿಗೆ ಕೊರೊನಾ - Chikkamagaluru corona news

ಇಂದು ಚಿಕ್ಕಮಗಳೂರು ಜಿಲ್ಲೆಯಲ್ಲಿ 92 ಕೊರೊನಾ ಪ್ರಕರಣ ದೃಢಪಟ್ಟಿದೆ.

Chikkamagaluru
Chikkamagaluru

By

Published : Aug 11, 2020, 5:47 PM IST

ಚಿಕ್ಕಮಗಳೂರು:ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂದು 92 ಮಂದಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 1,706ಕ್ಕೆ ಏರಿಕೆಯಾಗಿದೆ.

ಜಿಲ್ಲಾ ಕೋವಿಡ್ -19 ಆಸ್ಪತ್ರೆಯಿಂದ 58 ಜನರು ಗುಣಮುಖರಾಗಿ ಇಂದು ಬಿಡುಗಡೆಯಾಗಿದ್ದು ಈವರೆಗೂ ಜಿಲ್ಲೆಯಲ್ಲಿ ಒಟ್ಟು 733 ಜನ ಸೋಂಕಿತರು, ಜಿಲ್ಲಾ ಕೋವಿಡ್ -19 ಆಸ್ಪತ್ರೆಯಲ್ಲಿ ಚಿಕಿತ್ಸೆಯನ್ನು ಪಡೆದು ಗುಣಮುಖರಾಗಿ ಬಿಡುಗಡೆಯಾದಂತೆ ಆಗಿದೆ.

ತಾಲೂಕಿನಲ್ಲಿ 33, ಕಡೂರು ತಾಲೂಕಿನಲ್ಲಿ 11, ತರೀಕೆರೆ ತಾಲೂಕಿನಲ್ಲಿ 31, ಮೂಡಿಗೆರೆ ತಾಲೂಕಿನಲ್ಲಿ 05, ಕೊಪ್ಪ ತಾಲ್ಲೂಕಿನಲ್ಲಿ 02, ಎನ್ ಆರ್ ಪುರ ತಾಲೂಕಿನಲ್ಲಿ 04, ಶೃಂಗೇರಿ ತಾಲೂಕಿನಲ್ಲಿ 06, ಸೋಂಕಿತ ಪ್ರಕರಣಗಳು ಪತ್ತೆಯಾಗಿದೆ. ಈ ದಿನ ಕೊರಾನಾ ಸೋಂಕಿಗೆ ಮೂರು ಜನರು ಬಲಿಯಾಗಿದ್ದು, ಈವರೆಗೂ ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 34ಕ್ಕೆ ಏರಿಕೆಯಾಗಿದೆ.

ಇಂದು ಪತ್ತೆಯಾದ ಸೋಂಕಿತರು ವಾಸ ಮಾಡುತ್ತಿದ್ದ, ಏರಿಯಾವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಸಂಪೂರ್ಣ ಸೀಲ್ ಡೌನ್ ಮಾಡಿ ಕಟ್ಟೆಚ್ಚರ ವಹಿಸಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,706 ಕ್ಕೆ ಏರಿಕೆಯಾಗಿದ್ದು, ಜಿಲ್ಲೆಯಲ್ಲಿ ಒಟ್ಟು 939 ಸಕ್ರಿಯ ಪ್ರಕರಣಗಳಿವೆ.

ABOUT THE AUTHOR

...view details