ಚಿಕ್ಕಮಗಳೂರು: ಬಾಳೆಹೊನ್ನೂರಿನಲ್ಲಿ ದಲಿತ ಕೂಲಿ ಕಾರ್ಮಿಕರನ್ನು ಕೂಡಿ ಹಾಕಿ ಹಲ್ಲೆ ನಡೆಸಿದ ಘಟನೆ ಹಾಗೂ ಘಟನೆಯಲ್ಲಿ ದಲಿತ ಮಹಿಳೆಗೆ ಗರ್ಭಪಾತವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ದಲಿತ ಸಂಘಟನೆಗಳ ಒಕ್ಕೂಟವು ಪ್ರತಿಭಟನೆ ನಡೆಸಿದೆ.
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದು, ಕೂಡಲೇ ಆರೋಪಿ ಜಗದೀಶ್ ಗೌಡ ಹಾಗೂ ಆತನ ಮಗನನ್ನು ಬಂಧಿಸುವಂತೆ ಆಗ್ರಹಿಸಿದರು. ಈ ಬಗ್ಗೆ ಕ್ರಮಕೈಗೊಳ್ಳದ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿದರು.