ಚಿಕ್ಕಮಗಳೂರು: ಜಿಲ್ಲೆಯಲ್ಲಿ 10ನೇ ತರಗತಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿರುವ ಹಿನ್ನೆಲೆ ಶಿಕ್ಷಕರು ಮತ್ತು ವಿದ್ಯಾರ್ಥಿಗಳಲ್ಲಿ ಆತಂಕ ಹೆಚ್ಚಾಗಿದೆ. ಸೋಂಕು ತಗುಲಿರುವುದು ದೃಢವಾದ ಕಾರಣ 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ.
ಕಾಫಿನಾಡಿನಲ್ಲಿ ಕೋವಿಡ್ಗೆ ದಂಪತಿ ಬಲಿ: 10ನೇ ತರಗತಿ ವಿದ್ಯಾರ್ಥಿನಿಗೂ ಕೊರೊನಾ!
ಕೊರೊನಾ ಎರಡನೇ ಅಲೆಗೆ ಸಿಲುಕಿ ಕಾಫಿನಾಡಲ್ಲಿ ದಂಪತಿ ಬಲಿಯಾಗಿದ್ದಾರೆ. ಪತಿ-ಪತ್ನಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ. 10ನೇ ತರಗತಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ತಗುಲಿದ್ದು, 8 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಕೋವಿಡ್ ಟೆಸ್ಟ್ ಮಾಡಲಾಗುತ್ತಿದೆ.
400ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಕೊರೊನಾ ಟೆಸ್ಟ್ ಮಾಡಲಾಗುತ್ತಿದ್ದು, ಪ್ರೌಢಶಾಲೆ, ಕಾಲೇಜು ವಿದ್ಯಾರ್ಥಿಗಳಿಗೂ ಟೆಸ್ಟ್ ನಡೆಸಲಾಗುತ್ತಿದೆ. ಪ್ರೌಢ ಶಾಲೆ ಆವರಣದಲ್ಲೇ ಪದವಿ ಪೂರ್ವ ಕಾಲೇಜು ಇದೆ. ಚಿಕ್ಕಮಗಳೂರು ನಗರದ ಬಸವನಹಳ್ಳಿ ಬಾಲಕಿಯರ ಪ್ರೌಢ ಮತ್ತು ಪದವಿ ಪೂರ್ವ ಕಾಲೇಜಿನಲ್ಲಿ ಕೊರೊನಾ ಪ್ರಕರಣ ದಾಖಲಾಗಿದೆ.
ಕೊರೊನಾಗೆ ಪತಿ-ಪತ್ನಿ ಸಾವು:
ಇದರ ಜೊತೆಗೆ ಕೊರೊನಾ ಎರಡನೇ ಅಲೆಗೆ ಕಾಫಿನಾಡಲ್ಲಿ ಪತಿ-ಪತ್ನಿ ಸಾವನ್ನಪ್ಪಿದ್ದಾರೆ. ನಿನ್ನೆ 68 ವರ್ಷದ ಪತಿ ಸಾವನ್ನಪ್ಪಿದ್ದರೇ, ಇಂದು ಅವರ 58 ವರ್ಷದ ಪತ್ನಿ ಕೊರೊನಾಗೆ ಬಲಿಯಾಗಿದ್ದಾರೆ. ಮೃತರು ಚಿಕ್ಕಮಗಳೂರು ನಗರದ ನೆಹರೂ ನಗರದ ನಿವಾಸಿಗಳಾಗಿದ್ದಾರೆ. ಕ್ಯಾನ್ಸರ್ ಸೇರಿ ವಿವಿಧ ಕಾಯಿಲೆಗಳಿಂದ ಈ ದಂಪತಿ ಬಳಲುತ್ತಿದ್ದರು ಎನ್ನಲಾಗ್ತಿದೆ.