ಚಿಕ್ಕಮಗಳೂರು:ಜಿಲ್ಲೆಯ ಕಡೂರು ತಾಲೂಕಿನಲ್ಲಿ ದಂತ ವೈದ್ಯ ರೇವಂತ್ ಎಂಬಾತ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿದ್ದಾನೆ.
ನಾಲ್ಕು ದಿನಗಳ ಹಿಂದೆ ರೇವಂತ್ ಪತ್ನಿ ಕವಿತಾರನ್ನು ಲಕ್ಷ್ಮೀಶ ನಗರದಲ್ಲಿರುವ ಮನೆಯಲ್ಲಿ ಕತ್ತು ಸೀಳಿ ಹತ್ಯೆ ಮಾಡಲಾಗಿತ್ತು. ಜಿಲ್ಲೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿ ತನಿಖೆ ನಡೆಸುತ್ತಿದ್ದರು. ಈಗ ಡಾ. ರೇವಂತ್ ಆತ್ಮಹತ್ಯೆಗೆ ಶರಣಾಗಿರೋದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಕಡೂರು ತಾಲೂಕಿನ ಬಂಡಿಕೊಪ್ಪಲು ರೈಲ್ವೆ ಗೇಟ್ ಬಳಿ ಈ ಘಟನೆ ನಡೆದಿದೆ.