ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಿನಲ್ಲಿ ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ, ಆಸ್ಪತ್ರೆಗೆ ದಾಖಲು - ತರೀಕೆರೆಯಲ್ಲಿ ಸರ್ಕಾರಿ ಅಪರ ಅಭಿಯೋಜಕರ ಮೇಲೆ ಅಪರಿಚಿತರಿಂದ ಹಲ್ಲೆ

ಸರ್ಕಾರಿ ಅಧಿಕಾರಿಯೊಬ್ಬರ ಮೇಲೆ ಅಪರಿಚಿತರು ಹಲ್ಲೆ ನಡೆಸಿ ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಸರ್ಕಾರಿ ಅಧಿಕಾರಿ ಮೇಲೆ ಹಲ್ಲೆ

By

Published : Oct 15, 2019, 11:42 PM IST

ಚಿಕ್ಕಮಗಳೂರು: ಜಿಲ್ಲೆಯ ತರೀಕೆರೆಯಲ್ಲಿ ಸರ್ಕಾರಿ ಅಪರ ಅಭಿಯೋಜಕರ ಮೇಲೆ ಅಪರಿಚಿತರು ಹಲ್ಲೆ ನಡೆಸಿರುವ ಆರೋಪ ಕೇಳಿ ಬಂದಿದೆ.

ಅಧಿಕಾರಿ ಸುರೇಶ್ ಚಂದ್ರ ಮೇಲೆ ಹಲ್ಲೆ ಮಾಡಲಾಗಿದ್ದು, ಅಪರಿಚಿತರು ನಗರದ ನ್ಯಾಯಾಲಯದ ಹೊರಭಾಗದಲ್ಲಿ ಕಲ್ಲಿನಿಂದ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಸದ್ಯಗಾಯಾಳು ಸುರೇಶ್ ಚಂದ್ರರನ್ನು ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ತರೀಕೆರೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For All Latest Updates

TAGGED:

ABOUT THE AUTHOR

...view details