ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಲ್ಲಿ ಭಾರಿ ಮಳೆ: ವರುಣನ ಅಬ್ಬರಕ್ಕೆ ಒಬ್ಬ ಬಲಿ - ಎನ್ ಆರ್ ಪುರ ತಾಲೂಕಿನ ಸಾತ್ಕೊಳ ಗ್ರಾಮ

Chikkamagaluru Rain: ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿದ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಅಷ್ಟೇ ಅಲದೆ, ವರುಣನ ಆರ್ಭಟಕ್ಕೆ ಕಾರೊಂದು ಹಳ್ಳಕ್ಕೆ ಬಿದ್ದ ಪರಿಣಾಮ ಒಬ್ಬ ಪ್ರಾಣ ಕಳೆದುಕೊಂಡಿದ್ದಾರೆ. ರಭಸವಾಗಿ ನೀರು ಹರಿಯುತ್ತಿದ್ದ ಕಾರಣ ನೂರಾರು ಮೀಟರ್​ನಷ್ಟು ದೂರ ಕಾರು ಕೊಚ್ಚಿಕೊಂಡು ಹೋಗಿದೆ.

rain
Etv Bharat,ಮಳೆ

By

Published : Aug 10, 2022, 7:43 AM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯಿಂದ ಹಲವು ಅವಾಂತರಗಳು ಸಂಭವಿಸಿದ್ದು, ಒಬ್ಬ ಜೀವ ಕಳೆದು ಕೊಂಡಿದ್ದಾರೆ. ಈ ಬಾರಿಯ ಮುಂಗಾರಿನ ಅಬ್ಬರಕ್ಕೆ ಚಿಕ್ಕಮಗಳೂರಿನಲ್ಲಿ ಒಟ್ಟು ಮೂರು ಮಂದಿ ಪ್ರಾಣ ಕಳೆದುಕೊಂಡಂತಾಗಿದೆ.

ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕಾರೊಂದು ಕೊಚ್ಚಿ ಹೋದ ಪರಿಣಾಮ ಚಾಲಕ ಪ್ರಸನ್ನ (51) ಮೃತ ಪಟ್ಟಿರುವ ಘಟನೆ ಎನ್ ಆರ್ ಪುರ ತಾಲೂಕಿನ ಸಾತ್ಕೊಳ ಗ್ರಾಮದಲ್ಲಿ ನಡೆದಿದೆ. ಅರಿಶಿಣಗೆರೆಯ ಪ್ರಸನ್ನ ಅವರು ಸಂಬಂಧಿಕರ ಮನೆಗೆ ಶ್ರಾವಣ ಪೂಜೆ ಕಾರ್ಯಕ್ರಮಕ್ಕೆಂದು ಹೋಗುವಾಗ ಕಾರು ಸಮೇತ ಹಳ್ಳಕ್ಕೆ ಬಿದ್ದಿದ್ದಾರೆ. ರಭಸವಾಗಿ ನೀರು ಹರಿಯುತ್ತಿದ್ದ ಕಾರಣ ನೂರಾರು ಮೀಟರ್​ನಷ್ಟು ದೂರ ಕಾರು ಕೊಚ್ಚಿಕೊಂಡು ಹೋಗಿದೆ.

ಸ್ಥಳೀಯರು ಹಳ್ಳದಲ್ಲಿ ಬಿದ್ದಿದ್ದ ಕಾರನ್ನು ಕಂಡು ಪೊಲೀಸರ ಗಮನಕ್ಕೆ ತಂದಿದ್ದು, ನಂತರ ಮೇಲೆತ್ತಲಾಗಿದೆ. ಪ್ರಸನ್ನ ಅವರ ಮೃತ ದೇಹ ಕಾರಿನಲ್ಲಿ ಪತ್ತೆಯಾಗಿದೆ. ಇದರೊಂದಿಗೆ ಮಳೆಯಿಂದ ಜಿಲ್ಲೆಯಲ್ಲಿ ಮೂರು ಮಂದಿ ಜೀವ ಕಳೆದು ಕೊಂಡಂತಾಗಿದೆ. ಈ ಹಿಂದೆ ಚಿಕ್ಕಮಗಳೂರು ತಾಲೂಕು ಹೊಸಪೇಟೆಯ ಶಾಲಾ ಬಾಲಕಿ ಹಳ್ಳದಲ್ಲಿ ಕೊಚ್ಚಿ ಹೋಗಿದ್ದು, ಇನ್ನೂ ಆಕೆ ಪತ್ತೆಯಾಗಿಲ್ಲ. ಮತ್ತೊಂದು ಪ್ರಕರಣದಲ್ಲಿ ಕಳಸ ತಾಲೂಕಿನ ತೋಟದಲ್ಲಿ ಕೆಲಸ ಮಾಡುವಾಗ ಮರ ಬಿದ್ದು ಯುವತಿಯೊಬ್ಬಳು ಮೃತ ಪಟ್ಟಿದ್ದರು. ಈ ಎರಡೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಜಿಲ್ಲಾಡಳಿತ ಕುಟುಂಬಸ್ಥರಿಗೆ ಪರಿಹಾರ ವಿತರಿಸಿದೆ.

ಇದನ್ನೂ ಓದಿ:ಹಾವೇರಿ: ಮಳೆ ನೀರು ಸೇತುವೆ ಮೇಲೆ ಹರಿಯುತ್ತಿದ್ರೂ ಜನರ ದುಸ್ಸಾಹಸ

ABOUT THE AUTHOR

...view details