ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರು : ಹಳ್ಳದಲ್ಲಿ ಕೊಚ್ಚಿ ಹೋದ ಸ್ಕೂಟರ್​ ಸವಾರ - ತರೀಕೆರೆ ಹಳ್ಳದಲ್ಲಿ ಕೊಚ್ಚಿ ಹೋದ ವ್ಯಕ್ತಿ ನ್ಯೂಸ್​

ಸ್ವಗ್ರಾಮಕ್ಕೆ ಸ್ಕೂಟರ್​ನಲ್ಲಿ ತೆರಳುತ್ತಿದ್ದ ವ್ಯಕ್ತಿಯೊಬ್ಬರು ಹಳ್ಳದಲ್ಲಿ ಕೊಚ್ಚಿ ಹೋಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿಯ ಹುಲಿತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ..

ಹಳ್ಳದಲ್ಲಿ ಕೊಚ್ಚಿ ಹೋದ ಸ್ಕೂಟರ್​ ಸವಾರ
ಹಳ್ಳದಲ್ಲಿ ಕೊಚ್ಚಿ ಹೋದ ಸ್ಕೂಟರ್​ ಸವಾರ

By

Published : Nov 20, 2021, 2:31 PM IST

Updated : Nov 20, 2021, 3:48 PM IST

ಚಿಕ್ಕಮಗಳೂರು: ಸ್ಕೂಟರ್​ ಸವಾರನೊಬ್ಬ ಹಳ್ಳದಲ್ಲಿ ಕೊಚ್ಚಿ ಹೋಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನ ಲಿಂಗದಹಳ್ಳಿಯ ಹುಲಿತಿಮ್ಮಾಪುರ ಗ್ರಾಮದಲ್ಲಿ ನಡೆದಿದೆ.

ಪೊನ್ನಸ್ವಾಮಿ (45) ಎಂಬಾತ ನೀರಿನಲ್ಲಿ ಕೊಚ್ಚಿ ಹೋದ ವ್ಯಕ್ತಿ. ಹುಲಿತಿಮ್ಮಾಪುರ ಸಮೀಪದ ಹಳ್ಳದ ಕಿರು ಸೇತುವೆಯಲ್ಲಿ ಹೋಗುತ್ತಿದ್ದಾಗ ಭಾರಿ ಪ್ರಮಾಣದ ನೀರು ಹರಿದು ಬಂದ ಹಿನ್ನೆಲೆ ಈ ದುರಂತ ಸಂಭವಿಸಿದೆ. ಪೊನ್ನಸ್ವಾಮಿ ಲಿಂಗದ ಹಳ್ಳಿಯಿಂದ ಸಿದ್ದರಹಳ್ಳಿಗೆ ತೆರಳುತ್ತಿದ್ದರು ಎನ್ನಲಾಗಿದೆ.

ಹಳ್ಳದಲ್ಲಿ ಕೊಚ್ಚಿ ಹೋದ ಸ್ಕೂಟರ್​ ಸವಾರ

ಇಂದು ಬೆಳಗ್ಗೆ ತರೀಕೆರೆ ತಾಲೂಕಿನ ಅಗ್ನಿಶಾಮಕ ದಳದ ಸಿಬ್ಬಂದಿ ಶೋಧ ಕಾರ್ಯ ನಡೆಸಿದೆ. ಕೊಚ್ಚಿ ಹೋದ ಸ್ಥಳದಿಂದ ನೂರು ಮೀಟರ್ ದೂರದಲ್ಲಿ ವ್ಯಕ್ತಿಯ ಮೃತದೇಹ ಪತ್ತೆಯಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿಗೆ ಪೊಲೀಸರು ಸಾಥ್ ನೀಡಿದ್ದಾರೆ. ಲಿಂಗದಹಳ್ಳಿ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

Last Updated : Nov 20, 2021, 3:48 PM IST

ABOUT THE AUTHOR

...view details