ಕರ್ನಾಟಕ

karnataka

ETV Bharat / state

ಕ್ರಿಕೆಟ್ ಆಡಲು ಬಂದಿದ್ದ ಪಶುವೈದ್ಯ ಹೃದಯಘಾತದಿಂದ ಸಾವು - ಹೃದಯಘಾತದಿಂದ ಪಶುವೈದ್ಯ ಸಾವು

ಕ್ರಿಕೆಟ್ ಆಡಲು ಬಂದಿದ್ದ ಪಶುವೈದ್ಯರೊಬ್ಬರು ಹೃದಯಘಾತದಿಂದ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ನಗರದ ಸುಭಾಷ್ ಚಂದ್ರ ಬೋಸ್ ಕ್ರೀಡಾಂಗಣದಲ್ಲಿ ನಡೆದಿದೆ.

veterinarian died  died of a heart attack  ಹೃದಯಘಾತದಿಂದ ಪಶುವೈದ್ಯ ಸಾವು  ಕ್ರಿಕೆಟ್ ಆಡಲು ಬಂದಿದ್ದ ಪಶುವೈದ್ಯ ಸಾವು
ಕ್ರಿಕೆಟ್ ಆಡಲು ಬಂದಿದ್ದ ಪಶುವೈದ್ಯ ಹೃದಯಘಾತದಿಂದ ಸಾವು

By ETV Bharat Karnataka Team

Published : Jan 12, 2024, 8:57 PM IST

ಕ್ರಿಕೆಟ್ ಆಡಲು ಬಂದಿದ್ದ ಪಶುವೈದ್ಯ ಹೃದಯಘಾತದಿಂದ ಸಾವು

ಚಿಕ್ಕಮಗಳೂರು:ಕ್ರಿಕೆಟ್ ಆಡಲು ಬಂದಿದ್ದ ಕೊಡಗು ಜಿಲ್ಲೆ ಸೋಮವಾರಪೇಟೆ ಪಶು ವೈದ್ಯ ಹೃದಯಾಘಾತದಿಂದ ಕ್ರೀಡಾಂಗಣದಲ್ಲಿ ಕುಸಿದು ಬಿದ್ದು ಮೃತ ಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಚಿಕ್ಕಮಗಳೂರು ನಗರದ ಸುಭಾಷ್ ಚಂದ್ರ ಬೋಸ್ ಜಿಲ್ಲಾ ಆಟದ ಮೈದಾನದಲ್ಲಿ ವಿಭಾಗ ಮಟ್ಟದ ಕ್ರಿಕೆಟ್ ಕ್ರೀಡಾಕೂಟ ಆಯೋಜಿಸಲಾಗಿತ್ತು. ಕೊಡಗು ಜಿಲ್ಲೆಯ ಸೋಮವಾರ ಪೇಟೆಯ ಪಶು ವೈದ್ಯ ಶಿವಪ್ಪ ಬಾದಾಮಿ ಎಂಬುವರು ಮೊದಲು ಒಂದು ಕ್ರಿಕೆಟ್ ಮ್ಯಾಚ್ ಆಡಿ ನಂತರ ಫೋಟೋ ಸೇಷನ್​ನಲ್ಲಿ ಪಾಲ್ಗೊಂಡಿದ್ದರು. ನಂತರ ಅಲ್ಲಿಯೇ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರಿಗೆ ತುರ್ತು ಚಿಕಿತ್ಸೆ ನೀಡಿ, ಆಸ್ಪತ್ರೆಗೆ ಕರೆದೊಯ್ಯುವ ವೇಳೆಯಲ್ಲಿ ಮೃತ ಪಟ್ಟಿದ್ದಾರೆ.

ಅವರ ಮೃತ ದೇಹವನ್ನು ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆ ಶವಾಗಾರದಲ್ಲಿ ಇರಿಸಲಾಗಿದೆ. ಮೈಸೂರು ವಿಭಾಗ ಮಟ್ಟದ ಪಶು ವೈದ್ಯರ ಕ್ರೀಡಾಕೂಟಕ್ಕೆ ಏಳು ಜಿಲ್ಲೆಗಳ 12 ತಂಡಗಳು ಆಗಮಿಸಿದ್ದವು. ಚಿಕ್ಕಮಗಳೂರು ಪಶುವೈದ್ಯ ಸಂಘ ಆಯೋಜಿಸಿದ್ದ ಎರಡು ದಿನಗಳ ಕ್ರಿಕೆಟ್‌ ಕ್ರೀಡಾಕೂಟದಲ್ಲಿ ಭಾಗವಹಿಸಲು ಕೊಡಗು ತಂಡದಿಂದ ಶಿವಪ್ಪ ಬಾದಾಮಿ ಕ್ರಿಕೆಟ್​ ಆಡಲು ಇಂದು ನಗರಕ್ಕೆ ಆಗಮಿಸಿದ್ದರು.

ಒಂದು ಪಂದ್ಯ ಉತ್ಸಾಹದಿಂದ ಆಡಿದ ಅವರು, ಗ್ರೂಪ್ ಫೋಟೋ ತೆಗೆಸಿಕೊಳ್ಳುವ ವೇಳೆ ಸ್ಥಳದಲ್ಲಿ ಕುಸಿದು ಬಿದ್ದಿದು ಮೃತಪಟ್ಟಿದ್ದಾರೆ. ಮೂಲತಃ ಶಿವಪ್ಪ ಬಾದಾಮಿ ಅವರು ಬೆಳಗಾವಿ ಜಿಲ್ಲೆಯವರಾಗಿದ್ದಾರೆ. ಅವರ ಹಠತ್ ನಿಧನದಿಂದ ಕ್ರೀಡಾಕೂಟವನ್ನು ಸ್ಥಗಿತಗೊಳಿಸಲಾಗಿದೆ. ಈ ಅಕಾಲಿಕ ಮರಣಕ್ಕೆ ಪಶು ವೈದ್ಯರು ಕಂಬನಿ ಮಿಡಿದಿದ್ದಾರೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ದುರಂತ ಘಟನೆ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ ಘಟನೆಯ ಕುರಿತು ಮಾಹಿತಿ ಕಲೆಹಾಕುತ್ತಿದ್ದಾರೆ.

ಇತ್ತೀಚಿನ ಪ್ರಕರಣ- ಕರ್ತವ್ಯದಲ್ಲಿದ್ದ ಬಸ್​ ಚಾಲಕ ಹೃದಯಾಘಾತದಿಂದ ಸಾವು:ಕಾರ್ಯನಿರ್ವಹಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್ ಚಾಲಕ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಮೂಡಿಗೆರೆಯಲ್ಲಿ ಇತ್ತೀಚೆಗೆ ನಡೆದಿದೆ. ಕೊಪ್ಪಳ ಮೂಲದ ರವಿ ಲಮಾಣಿ (45) ಸಾವನ್ನಪ್ಪಿರುವ ವ್ಯಕ್ತಿ.

ಮೂಡಿಗೆರೆಯಿಂದ ಗುತ್ತಿಹಳ್ಳಿ ಮಾರ್ಗವಾಗಿ ಹೆಸಗೋಡು ಗ್ರಾಮಕ್ಕೆ ಬಸ್​ ಚಲಾಯಿಸಿಕೊಂಡು ಹೋಗುವಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡಿತ್ತು. ಸಮಯಪ್ರಜ್ಞೆ ಮೆರೆದ ಚಾಲಕ ರವಿ ಬಸ್​ನ್ನು ಹೆಸಗೋಡು ಗ್ರಾಮದಲ್ಲಿ ನಿಲ್ಲಿಸಿದ್ದರು. ಕೊಡಲೇ ಅವರನ್ನು ಆಂಬ್ಯುಲೆನ್ಸ್​ ಮೂಲಕ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಚಾಲಕ ರವಿ ಲಮಾಣಿ ಮೃತಪಟ್ಟಿದ್ದರು. ಮೂಡಿಗೆರೆ ಎಂಜಿಎಂ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಲಾಗುತ್ತಿದೆ. ಬಣಕಲ್ ಪೊಲೀಸ್ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ:ಪಾಳು ಬಿದ್ದ ಕೆಫೆಯಲ್ಲಿ ವ್ಯಕ್ತಿಯ ತಲೆ ಬುರುಡೆ ಪತ್ತೆ; ಕೊಲೆ ಶಂಕೆ

ABOUT THE AUTHOR

...view details