ಕರ್ನಾಟಕ

karnataka

ETV Bharat / state

ಜಮೀನಿನಲ್ಲಿ ಕೆಲಸ ಮಾಡುತ್ತಿರುವ ವೇಳೆ ಕಾಡು ಹಂದಿ ದಾಳಿ.. ರೈತನ ಸ್ಥಿತಿ ಗಂಭೀರ - pig attacks on a person in chikkamagaluru

ಜಮೀನಿನಲ್ಲಿ ಕೆಲಸ ಮಾಡುತ್ತಿರುವ ವೇಳೆ ವ್ಯಕ್ತಿಯ ಮೇಲೆ ಕಾಡುಹಂದಿ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ‌ ಬೂದಿಗುಡ್ಡ ಗ್ರಾಮದ ಬಳಿ ನಡೆದಿದೆ.

ರೈತನ ಮೇಲೆ  ಕಾಡು ಹಂದಿ ದಾಳಿ
ರೈತನ ಮೇಲೆ ಕಾಡು ಹಂದಿ ದಾಳಿ

By

Published : Dec 4, 2019, 2:08 PM IST

ಚಿಕ್ಕಮಗಳೂರು: ಜಮೀನಿನಲ್ಲಿ ಕೆಲಸ ಮಾಡುತ್ತಿರುವ ವೇಳೆ ವ್ಯಕ್ತಿಯ ಮೇಲೆ ಕಾಡುಹಂದಿ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ‌ ಬೂದಿಗುಡ್ಡ ಗ್ರಾಮದ ಬಳಿ ನಡೆದಿದೆ.

ಲೋಕೇಶಪ್ಪ (65) ಎಂಬುವರು ದಾಳಿಗೊಳಗಾದ ವ್ಯಕ್ತಿ. ಜಿಲ್ಲಾಸ್ಪತ್ರೆಯಲ್ಲಿ ಪ್ರಥಮ‌ ಚಿಕಿತ್ಸೆ ನೀಡಲಾಗಿದ್ದು, ಗಂಭೀರ ಗಾಯಗೊಂಡ ಹಿನ್ನೆಲೆ ಹೆಚ್ಚಿನ ಚಿಕಿತ್ಸೆಗಾಗಿ ವೈದ್ಯರು ಬೆಂಗಳೂರಿಗೆ ಶಿಫಾರಸು ಮಾಡಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿರುವ ವೇಳೆ ಈ ಘಟನೆ ನಡೆದಿದ್ದು, ವ್ಯಕ್ತಿಯ ಎದೆ, ತಲೆಯ ಭಾಗಕ್ಕೆ ಹಂದಿ ಗುದ್ದಿದೆ.

ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ABOUT THE AUTHOR

...view details