ಚಿಕ್ಕಮಗಳೂರು:ನವವಿವಾಹಿತೆಯೋರ್ವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ತರಿಕೆರೆ ತಾಲೂಕಿನ ಶಿವನಿ ಸಮೀಪದ ದಂದೂರು ಗ್ರಾಮದಲ್ಲಿ ನಡೆದಿದೆ.
ಪ್ರೇಮ ವಿವಾಹವಾಗಿ 6 ತಿಂಗಳಿಗೆ ನವವಿವಾಹಿತೆ ಆತ್ಮಹತ್ಯೆಗೆ ಶರಣು - undefined
ಪ್ರೇಮ ವಿವಾಹವಾಗಿ 6 ತಿಂಗಳಿಗೆ ನವವಿವಾಹಿತೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ದಂದೂರು ಗ್ರಾಮದಲ್ಲಿ ನಡೆದಿದೆ.
ಲತಾ (19) ಆತ್ಮಹತ್ಯೆ ಮಾಡಿಕೊಂಡ ನವವಿವಾಹಿತೆ. ಈಕೆ ದಂದೂರಿನ ನಿವಾಸಿ. ಲತಾ ಅದೇ ಊರಿನ ಧರ್ಮರಾಜ್ ಎಂಬುವರನ್ನು ಪ್ರೀತಿಸಿ ವಿವಾಹವಾಗಿದ್ದರು. ಲತಾ ಧರ್ಮರಾಜ್ನನ್ನು ಪ್ರೀತಿಸುತ್ತಿದ್ದು ಆಕೆಯ ಕುಟುಂಬದವರಿಗೆ ಇಷ್ಟವಿರಲಿಲ್ಲ. ಆದರೆ ಹುಡುಗಿಯ ಕಡೆಯವರು ಯಾರು ಇಲ್ಲದೆ ಧರ್ಮರಾಜ್ ಪೋಷಕರೇ ಧರ್ಮರಾಜ್ ಹಾಗೂ ಲತಾಳಿಗೆ ಮದುವೆ ಮಾಡಿಸಿದ್ದರು ಎನ್ನಲಾಗಿದೆ.
ಮದುವೆಯಾಗಿ 6 ತಿಂಗಳಿಗೆ ಲತಾ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದು ಆತ್ಮಹತ್ಯೆಯಲ್ಲ. ಕೊಲೆ ಎಂದು ಲತಾ ಪೋಷಕರು ಆರೋಪಿಸಿದ್ದಾರೆ. ಅಜ್ಜಂಪುರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.