ಚಿಕ್ಕಮಗಳೂರು : ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿಗೆ ಹೆರಿಗೆ ನೋವು ಕಾಣಿಸಿಕೊಂಡಿದ್ದು, ಮಾರ್ಗ ಮಧ್ಯದಲ್ಲಿಯೇ ಬಸ್ಸಿನ ಮಹಿಳಾ ನಿರ್ವಾಹಕಿ ಮಹಿಳೆಗೆ ಹೆರಿಗೆ ಮಾಡಿಸಿರುವ ಘಟನೆ ನಡೆದಿದೆ.
ಚಿಕ್ಕಮಗಳೂರು ವಿಭಾಗದ ಚಿಕ್ಕಮಗಳೂರು ಘಟಕ ವಾಹನ ಸಂಖ್ಯೆ ಕೆ. ಎ-18, ಎಫ್- 0865ರಲ್ಲಿ ಬೆಂಗಳೂರು- ಚಿಕ್ಕಮಗಳೂರು ಮಾರ್ಗ ಮಧ್ಯೆ ಸಂಚಾರದ ವೇಳೆ ಉದಯಪುರ ಸಮೀಪವಿರುವ ಕೃಷಿ ಕಾಲೇಜು ಹತ್ತಿರ ಸೋಮವಾರ ಮಧ್ಯಾಹ್ನ 1.25 ರ ವೇಳೆ ನಿಗಮದ ವಾಹನ ಸಂಚರಿಸುತ್ತಿತ್ತು. ಬಸ್ಸಿನಲ್ಲಿ ಒಟ್ಟು 45 ಜನ ಪ್ರಯಾಣಿಕರು ಪ್ರಯಾಣಿಸುತ್ತಿದ್ದರು.
ಇದನ್ನೂ ಓದಿ:ಸಹಜ ಹೆರಿಗೆಗೆ ಫೇಮಸ್ ಕೋಲಾರದ ಈ ಸರ್ಕಾರಿ ಆಸ್ಪತ್ರೆ: ತಿಂಗಳಿಗೆ 60ಕ್ಕೂ ಹೆಚ್ಚು ಡೆಲಿವರಿ
ಈ ಪೈಕಿ ಬೆಂಗಳೂರಿನಿಂದ ಬೇಲೂರಿಗೆ ಪ್ರಯಾಣಿಸುತ್ತಿದ್ದ ಓರ್ವ ಗರ್ಭಿಣಿ ಮಹಿಳೆಗೆ ಹೆರಿಗೆ ನೋವು ಕಾಣಿಸಿಕೊಂಡಿದೆ. ಬಸ್ ಸಾಗುವ ಮಾರ್ಗದಲ್ಲಿ ಹತ್ತಾರು ಕಿಲೋಮೀಟರ್ ದೂರದಲ್ಲಿ ಯಾವುದೇ ಆಸ್ಪತ್ರೆಗಳು ಇರಲಿಲ್ಲ. ಹೀಗಾಗಿ ಬಸ್ಸಿನಲ್ಲಿದ್ದ ಮಹಿಳಾ ಕಂಡಕ್ಟರ್ ವಾಹನವನ್ನು ನಿಲ್ಲಿಸಿ, ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲ ಪ್ರಯಾಣಿಕರನ್ನು ಕೆಳಗಿಳಿಸಿ ನೋವಿನಿಂದ ಬಳಲುತ್ತಿದ್ದ ಮಹಿಳೆಗೆ ಹೆರಿಗೆ ಮಾಡಿಸಿದ್ದಾರೆ.
ಇದನ್ನೂ ಓದಿ:ಕಾಡಿನ ದುರ್ಗಮ ಹಾದಿಯಲ್ಲಿ ಆ್ಯಂಬುಲೆನ್ಸ್ನಲ್ಲೇ ಮಗುವಿಗೆ ಜನ್ಮ ನೀಡಿದ ಮಹಿಳೆ
ಹೆಣ್ಣು ಮಗುವಿಗೆ ಜನ್ಮ ನೀಡಿದ ಮಹಿಳೆ:ಬಸ್ಸಿನ ನಿರ್ವಾಹಕಿ ಬಸ್ಸಿನಲ್ಲಿಯೇ ಹೆರಿಗೆಯನ್ನು ಮಾಡಿಸಿದ್ದು, ಮಹಿಳೆ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ತಾಯಿ-ಮಗು ಇಬ್ಬರೂ ಆರೋಗ್ಯವಾಗಿದ್ದಾರೆ. ಗರ್ಭಿಣಿಯ ಕುಟುಂಬದ ಸದಸ್ಯರು ಆರ್ಥಿಕವಾಗಿ ದುರ್ಬಲರಾಗಿದ್ದ ಕಾರಣ ಯಾವುದೇ ಖಾಸಗಿ ಕಾರು ಅಥವಾ ಆಂಬ್ಯುಲೆನ್ಸ್‌ನಲ್ಲಿ ಆಸ್ಪತ್ರೆಗೆ ಹೋಗಲಾಗದೆ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸಂಚಾರ ಮಾಡುತ್ತಿದ್ದರು ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಆರೋಗ್ಯ ಕೇಂದ್ರದ ಬಾಗಿಲು ಬಂದ್: ಆಸ್ಪತ್ರೆ ಹೊರಗೆ ಮಗುವಿಗೆ ಜನ್ಮ ನೀಡಿದ ಮಹಿಳೆ
ಇನ್ನು ಆರ್ಥಿಕ ಪರಿಸ್ಥಿತಿ ಉತ್ತಮವಾಗಿ ಇರದ ಹಿನ್ನೆಲೆ ತಕ್ಷಣದ ಖರ್ಚಿಗೆ ಅನುಕೂಲ ಆಗಲೆಂದು ಬಸ್‌ನ ಡ್ರೈವರ್ ಹಾಗೂ ಕಂಡಕ್ಟರ್ ಸೇರಿಕೊಂಡು ಪ್ರಯಾಣಿಕರ ಬಳಿ ಹಣ ಸಂಗ್ರಹಿಸಿ ಮಹಿಳೆಗೆ 1,500 ರೂ. ಹಣವನ್ನು ಕೊಟ್ಟು ಕಳುಹಿಸಿದ್ದಾರೆ. ನಂತರ ಮಹಿಳೆಯನ್ನು ಆಂಬ್ಯುಲೆನ್ಸ್ ಮೂಲಕ ಶಾಂತಿಗ್ರಾಮ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ಪಡೆಯಲು ಅನುಕೂಲ ಮಾಡಿದ್ದಾರೆ.
ಇದನ್ನೂ ಓದಿ:ಭೂಕಂಪನದ ಮಧ್ಯೆಯೇ ಹೆರಿಗೆ ಮಾಡಿಸಿ ತಾಯಿ, ಮಗುವಿನ ಜೀವ ಉಳಿಸಿದ ವೈದ್ಯರು!- ವಿಡಿಯೋ
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಆಯುಕ್ತರಿಂದ ಶ್ಲಾಘನೆ: ಮಹಿಳೆ ಮತ್ತು ಮಗು ಆರೋಗ್ಯವಾಗಿದ್ದಾರೆ. ಬಸ್‌ನಲ್ಲಿ ಹೆರಿಗೆ ನೋವಿನಿಂದ ಬಳಲುತ್ತಿದ್ದ ವೇಳೆ ಸಮಯಕ್ಕೆ ಸರಿಯಾಗಿ ಗರ್ಭಿಣಿಗೆ ಸ್ಪಂದಿಸಿ ಮಗು ಮತ್ತು ತಾಯಿಯನ್ನು ಉಳಿಸಿ ಮಾನವೀಯ ನೆರವನ್ನು ನೀಡಿದ ನಿರ್ವಾಹಕಿಯ ಕಾರ್ಯವು ನಿಜಕ್ಕೂ ಶ್ಲಾಘನೀಯ. ಮಹಿಳಾ ಕಂಡಕ್ಟರ್ ಅವರ ಕಾರ್ಯಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಿಬ್ಬಂದಿ ಮತ್ತು ಆಯುಕ್ತರು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ:ಬಳ್ಳಾರಿ ಕೊರ್ಲಗುಂದಿ ಮತಗಟ್ಟೆಯಲ್ಲಿ ಗಂಡು ಮಗುವಿಗೆ ಜನ್ಮನೀಡಿದ ಮಹಿಳೆ.. ಕಾಲಿನಿಂದ ಮತ ಚಲಾಯಿಸಿದ ವಿಶೇಷಚೇತನ