ಚಿಕ್ಕಮಗಳೂರು: ಜಿಲ್ಲೆಯಲ್ಲಿನ ಮಹಿಳೆಯೊಬ್ಬಳು ತನಗೆ ಕೊರೋನಾ ಸೋಂಕು ತಗುಲಿರಬಹುದು ಎಂಬ ಶಂಕೆಯಲ್ಲಿ ಚಿಕ್ಕಮಗಳೂರು ಜಿಲ್ಲಾಸ್ವತ್ರೆಯಲ್ಲಿ ನಿನ್ನೆ ದಾಖಲಾಗಿದ್ದರು. ಸದ್ಯ ಆಕೆಯ ವರದಿ ನೆಗೆಟಿವ್ ಬಂದಿದ್ದು, ಕಾಫಿನಾಡಿನ ಜನ ನಿಟ್ಟುಸಿರು ಬಿಡುವಂತಾಗಿದೆ.
ಜಿಲ್ಲಾಸ್ಪತ್ರೆಯ ಐಸೋಲೇಷನ್ ವಾರ್ಡ್ ನಲ್ಲಿ ಸುಮಾರು 76 ವರ್ಷದ ಮಹಿಳೆಗೆ ನಿನ್ನೆ ಸಂಜೆಯಿಂದಾ ಚಿಕಿತ್ಸೆ ನೀಡಲಾಗುತ್ತಿತ್ತು. ಅನಂತರ ನಿನ್ನೆ ಸಂಜೆ ಆಕೆಯ ರಕ್ತದ ಮಾದರಿಯನ್ನು ಪರೀಕ್ಷೆಗಾಗಿ ಹಾಸನ ಜಿಲ್ಲೆಗೆ ರವಾನೆ ಮಾಡಲಾಗಿತ್ತು. ಸದ್ಯ ಆಕೆಯ ವರದಿ ನೆಗೆಟಿವ್ ಬಂದಿದ್ದು, ಕಾಫಿನಾಡಿನ ಜನ ನಿಟ್ಟುಸಿರು ಬಿಡುವಂತಾಗಿದೆ.