ಚಿಕ್ಕಮಗಳೂರು:ಪಶು ವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಕಾಮುಕರನ್ನು ಬಂಧಿಸಿ ಮರಣ ದಂಡನೆ ಶಿಕ್ಷೆಗೆ ಒಳಪಡಿಸುವಂತೆ ಆಗ್ರಹಿಸಿ ಎಬಿವಿಪಿ ಸಂಘಟನೆ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
ವೈದ್ಯೆ ಪ್ರಿಯಾಂಕಾ ರೆಡ್ಡಿ ಹತ್ಯೆಗೆ ಖಂಡನೆ: ಕಾಮುಕರಿಗೆ ಮರಣ ದಂಡನೆ ವಿಧಿಸಲು ಆಗ್ರಹ
ಹೈದರಾಬಾದ್ನಲ್ಲಿ ಪಶು ವೈದ್ಯೆ ಪ್ರಿಯಾಂಕಾ ರೆಡ್ಡಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಘಟನೆ ಖಂಡಿಸಿ ಚಿಕ್ಕಮಗಳೂರಿನಲ್ಲಿ ಎಬಿವಿಪಿ ಪ್ರತಿಭಟನೆ ನಡೆಸಿತು.
ಎಬಿವಿಪಿ ಪ್ರತಿಭಟನೆ
ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿ, ಈ ಕ್ರೂರ ಘಟನೆಗೆ ಕಾರಣರಾದ ಆರೋಪಿಗಳಿಗೆ ತಕ್ಷಣವೇ ಮರಣ ದಂಡನೆ ವಿಧಿಸಬೇಕು ಎಂದು ಆಗ್ರಹಿಸಿದರು.
ತೆಲಂಗಾಣದ ಗೃಹ ಮಂತ್ರಿಗಳು ನೀಡಿದ ಹೇಳಿಕೆ ಕೀಳು ಮಾನಸಿಕತೆಯಿಂದ ಕೂಡಿದ್ದು, ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡುವ ಬದಲು ಅವರಿಗೆ ಮರಣ ದಂಡನೆ ವಿಧಿಸಬೇಕು ಎಂದು ಪ್ರತಿಭಟನಾನಿರತ ವಿದ್ಯಾರ್ಥಿಗಳು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.