ಚಿಕ್ಕಮಗಳೂರು:ಕಾಲೇಜು ಆರಂಭವಾಗುತ್ತಿರುವ ಹಿನ್ನಲೆ, ವಿದ್ಯಾರ್ಥಿಗಳ ಬಸ್ ಪಾಸ್ ರಿನಿವಲ್ ಮಾಡಿಕೊಡಬೇಕೆಂದು ಎಬಿವಿಪಿ ಸಂಘಟನೆಯ ಕಾರ್ಯಕರ್ತರು ಕೆ ಎಸ್ ಆರ್ ಟಿ ಸಿ ಯ ಅಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದ್ದಾರೆ.
ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ನವೀಕರಣಕ್ಕೆ ಮನವಿ - ವಿದ್ಯಾರ್ಥಿಗಳ ಬಸ್ ಪಾಸ್ ನವೀಕರಣಕ್ಕೆ ಮನವಿ
ಕಾಲೇಜು ವಿದ್ಯಾರ್ಥಿಗಳ ಬಸ್ ಪಾಸ್ ರಿನಿವಲ್ ಮಾಡಿಕೊಡಬೇಕೆಂದು ಎಬಿವಿಪಿ ಸಂಘಟನೆಯ ಕಾರ್ಯಕರ್ತರು ಕೆ ಎಸ್ ಆರ್ ಟಿ ಸಿ ಯ ಅಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.
ಸರ್ಕಾರದ ಆದೇಶ ಮೇರೆಗೆ ರಾಜ್ಯದ ಎಲ್ಲಾ ವಿಶ್ವ ವಿದ್ಯಾನಿಲಯಗಳು ಪುನರ್ ಆರಂಭವಾಗುತ್ತಿದ್ದು, ಸರ್ಕಾರದ ಆದೇಶದ ಮೇರೆಗೆ ಪರೀಕ್ಷೆಗಳು ಆರಂಭವಾಗುತ್ತಿವೆ. ಎಲ್ಲಾ ಕಾಲೇಜು ವಿದ್ಯಾರ್ಥಿಗಳು ಕಾಲೇಜಿಗೆ ಬರುವ ಕಾರಣ ಬಸ್ಸಿನ ಸೇವೆಯನ್ನು ಹೆಚ್ಚಾಗಿ ವಿದ್ಯಾರ್ಥಿಗಳು ನೆಚ್ಚಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ.
ಅಲ್ಲದೇ ವಿದ್ಯಾರ್ಥಿಗಳಿಗೆ ನೀಡಿರುವ ಪಾಸಿನ ದಿನಾಂಕ ಮುಕ್ತಾಯವಾಗಿದ್ದು, ಬಡ ವಿದ್ಯಾರ್ಥಿಗಳು ಹಾಗೂ ಗ್ರಾಮೀಣ ಭಾಗದ ವಿದ್ಯಾರ್ಥಿಗಳು ಕಾಲೇಜಿಗೆ ಹಾಗೂ ಪರೀಕ್ಷೆಗೆ ಬರಲು ತೊಂದರೆಯಾಗುತ್ತದೆ. ವಿದ್ಯಾರ್ಥಿಗಳಿಗೆ ನೀಡಿದ ಪಾಸ್ ಅನ್ನು ಪರ್ನಾವತಿಸಬೇಕಾಗಿ ಮತ್ತು ಪರೀಕ್ಷಾ ವೇಳೆಯಲ್ಲಿ ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಬಸ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡಬೇಕು ಎಂದು ಆಗ್ರಹಿಸಿ ಮನವಿ ಪತ್ರವನ್ನು ಸಲ್ಲಿಸಿದರು.