ಚಿಕ್ಕಮಗಳೂರು:ಬೈಕ್ ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಅಜ್ಜ ಹಾಗೂ ಮೊಮ್ಮಗ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.
ಟಿಪ್ಪರ್ - ಬೈಕ್ ನಡುವೆ ಭೀಕರ ಅಪಘಾತ: ಬೀರೂರಿನ ಇಬ್ಬರು ಬೈಕ್ ಸವಾರರ ಸಾವು - bike tippar accident
ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಅಜ್ಜ ಮತ್ತು ಮೊಮ್ಮಗ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಇನ್ನೂ ಲಾರಿಯಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತದ ತೀವ್ರತೆಯಿಂದ ಎರಡು ವಾಹನಗಳು ನಜ್ಜುಗುಜ್ಜಾಗಿದ್ದು, ಬೀರೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಇಲ್ಲಿನ ಕಡೂರು ತಾಲೂಕಿನ ಬೀರೂರು ರಾಷ್ಟ್ರೀಯ ಹೆದ್ದಾರಿ 206ರಲ್ಲಿ ಘಟನೆ ನಡೆದಿದ್ದು, ವೇಗವಾಗಿ ಬರುತ್ತಿದ್ದ ಟಿಪ್ಪರ್ಗೆ ಬೈಕ್ಗೆ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ನಲ್ಲಿದ್ದ ಇಬ್ಬರೂ ಮೃತಪಟ್ಟಿದ್ದಾರೆ.
ನಂತರ ರಸ್ತೆಯ ಪಕ್ಕದಲ್ಲಿದ್ದ ಮರಕ್ಕೆ ಟಿಪ್ಪರ್ ಹೋಗಿ ಗುದ್ದಿದ್ದು ಈ ಘಟನೆಯಲ್ಲಿ ಮಲ್ಲಪ್ಪ (57) ಉತ್ಸವ್ (11) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಈ ಮೃತ ದುರ್ದೈವಿಗಳು ಬೀರೂರಿನ ಬಳಿಗನೂರು ಗ್ರಾಮದವರಾಗಿದ್ದು, ಲಾರಿಯಲ್ಲಿದ್ದ ಇಬ್ಬರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ. ಬೀರೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.