ಚಿಕ್ಕಮಗಳೂರು: ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಸಮೀಪದ ಇಬ್ಬನಿ ಕೆಫೆ ಬಳಿ ಈ ಅಫಘಾತ ಸಂಭವಿಸಿದ್ದು, ಮಹೇಂದ್ರ ಜಿತೋ ಪ್ಯಾಸೆಂಜರ್ ವಾಹನ ಹಾಗೂ ಸ್ವಿಫ್ಟ್ ಕಾರಿನ ನಡುವೆ ಅಪಘಾತವಾಗಿದೆ.
ಚಿಕ್ಕಮಗಳೂರು: ಅಪಘಾತದಲ್ಲಿ ಐವರಿಗೆ ಗಂಭೀರ ಗಾಯ
ಚಿಕ್ಕಮಗಳೂರಿನಲ್ಲಿ ಮಹೇಂದ್ರ ಜಿತೋ ಪ್ಯಾಸೆಂಜರ್ ವಾಹನ ಹಾಗೂ ಸಿಫ್ಟ್ ಕಾರಿನ ನಡುವೆ ಅಪಘಾತ ಸಂಭವಿಸಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
accident
ಮಹೇಂದ್ರ ಜಿತೋ ವಾಹನ ಮೂಡಿಗೆರೆಯಿಂದ ಮಂಗಳೂರಿನ ಕಡೆ ಹೋಗುತ್ತಿತ್ತು. ಸ್ವಿಫ್ಟ್ ಕಾರಿನಲ್ಲಿದ್ದ ಪ್ರಯಾಣಿಕರು ಧರ್ಮಸ್ಥಳಕ್ಕೆ ಹೋಗಿ ಬೆಂಗಳೂರಿನ ಕಡೆ ಹೋಗುತ್ತಿದ್ದ ವೇಳೆ ಈ ದುರಂತ ನಡೆದಿದೆ. ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ಐದು ಜನ ಗಾಯಾಳುಗಳನ್ನು ಸ್ಥಳೀಯ ಆಸ್ವತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದ್ದು ಬಣಕಲ್ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.