ಕರ್ನಾಟಕ

karnataka

ETV Bharat / state

ಚಿಕ್ಕಮಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಯತ್ನ: ಆರೋಪಿ ಅರೆಸ್ಟ್! - Chikmagalur rape case

ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ ದೇವರಾಜ್​ನನ್ನು ಗೋಣಿಬೀಡು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

accused arrested who attempt to rape on student in Chikmagalur
ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಅರೋಪಿ ಅರೆಸ್ಟ್

By

Published : Jun 7, 2022, 6:14 PM IST

Updated : Jun 7, 2022, 6:53 PM IST

ಚಿಕ್ಕಮಗಳೂರು: ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ವ್ಯಕ್ತಿಯನ್ನು ಬಂಧಿಸುವಲ್ಲಿ ಗೋಣಿಬೀಡು ಪೊಲೀಸರು ಯಶಸ್ವಿಯಾಗಿದ್ದಾರೆ. ದೇವರಾಜ್ ಬಂಧಿತ ಆರೋಪಿಯಾಗಿದ್ದಾನೆ.

ಆರೋಪಿಗೆ ಕಠಿಣ ಶಿಕ್ಷೆ ಒದಗಿಸುವಂತೆ ಕೆಂಪೇಗೌಡ ಒಕ್ಕಲಿಗರ ಸಂಘದ ವತಿಯಿಂದ ಮನವಿ

ವಿದ್ಯಾರ್ಥಿನಿ ಮೂಡಿಗೆರೆ ಕಾಲೇಜಿನಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ವಿದ್ಯಾರ್ಥಿನಿಗೆ ಪರಿಚಿತನಾದ ಕಾರಣ ಆರೋಪಿಯು ಡ್ರಾಪ್ ಕೊಡುವ ನೆಪದಲ್ಲಿ ಸ್ಕೂಟಿಯಲ್ಲಿ ಕೂರಿಸಿಕೊಂಡು ತೆರಳಿದ್ದಾನೆ. ಆ ವೇಳೆ, ಅನುಚಿತವಾಗಿ ವರ್ತಿಸಿ ರಸ್ತೆಯ ಮಧ್ಯೆ ನಿಲ್ಲಿಸಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ತಕ್ಷಣ ಮನೆಯವರಿಗೆ ವಿದ್ಯಾರ್ಥಿನಿ ವಿಷಯ ತಿಳಿಸಿದ್ದು, ಕೂಡಲೇ ಪೋಷಕರು ಗೋಣಿಬೀಡು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇದನ್ನೂ ಓದಿ:ಪಠ್ಯ ಪುಸ್ತಕ ಪರಿಷ್ಕರಣೆ ಇಲ್ಲ, ಬರಗೂರು ನೀಡಿದ ಪಠ್ಯವನ್ನೇ ಮುಂದುವರೆಸುತ್ತೇವೆ : ಸಚಿವ ನಾಗೇಶ್​

ಪ್ರಕರಣ ದಾಖಲಾಗುತ್ತಿದ್ದಂತೆ ಗೋಣಿಬೀಡು ಪೊಲೀಸ್ ಠಾಣಾಧಿಕಾರಿ ಧನಂಜಯ್ ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಈ ಬಗ್ಗೆ ವಿಚಾರ ತಿಳಿದ ಕೂಡಲೇ ಕೆಂಪೇಗೌಡ ಒಕ್ಕಲಿಗರ ಸಂಘದ ವತಿಯಿಂದ ಗೋಣಿಬೀಡು ಠಾಣಾಧಿಕಾರಿಗಳಿಗೆ ಆರೋಪಿಗೆ ಕಠಿಣ ಶಿಕ್ಷೆಯಾಗಬೇಕೆಂದು ಮನವಿ ಮಾಡಿದ್ದಾರೆ. ತನಿಖೆ ಮುಂದುವರಿದಿದೆ.

Last Updated : Jun 7, 2022, 6:53 PM IST

ABOUT THE AUTHOR

...view details