ಕರ್ನಾಟಕ

karnataka

ETV Bharat / state

ಮತ್ತೆ ಹಿಜಾಬ್ ಗದ್ದಲ: ಚಿಕ್ಕಮಗಳೂರು ಕಾಲೇಜಿನಲ್ಲಿ 25 ವಿದ್ಯಾರ್ಥಿನಿಯರಿಗೆ ತಡೆ

ಕಾಫಿ ನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಮತ್ತೆ ಹಿಜಾಬ್ ವಿವಾದ ಶುರುವಾದಂತಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿಗಳನ್ನು ಕಾಲೇಜು ಗೇಟ್ ಮುಂಭಾಗದಲ್ಲಿ ಸಿಬ್ಬಂದಿ ತಡೆದು ನಿಲ್ಲಿಸಿದ್ದಾರೆ.

again-hijab
ಹಿಜಾಬ್ ಗದ್ದಲ

By

Published : Mar 5, 2022, 3:34 PM IST

Updated : Mar 5, 2022, 4:30 PM IST

ಚಿಕ್ಕಮಗಳೂರು:ಜಿಲ್ಲೆಯಲ್ಲಿ ಮತ್ತೆ ಹಿಜಾಬ್ ವಿವಾದ ಶುರುವಾದಂತಿದೆ. ಹಿಜಾಬ್ ಧರಿಸಿ ಕಾಲೇಜಿಗೆ ಬಂದ ವಿದ್ಯಾರ್ಥಿನಿಯರನ್ನು ಕಾಲೇಜು ಗೇಟ್ ಮುಂಭಾಗದಲ್ಲಿ ಸಿಬ್ಬಂದಿ ತಡೆದು ನಿಲ್ಲಿಸಿದ್ದಾರೆ. ನಗರದ ಐಡಿಎಸ್​ಜಿ ಕಾಲೇಜಿನಲ್ಲಿ ಈ ಘಟನೆ ನಡೆದಿದೆ.

ಕಾಲೇಜು ಗೇಟ್ ಮುಂಭಾಗದಲ್ಲಿಯೇ ಹಿಜಾಬ್ ಧರಿಸಿದ​ 25 ವಿದ್ಯಾರ್ಥಿನಿಯರನ್ನು ಕಾಲೇಜು ಆಡಳಿತ ಮಂಡಳಿಯ ನಿರ್ದೇಶನದ ಮೇರೆಗೆ ಸಿಬ್ಬಂದಿ ತಡೆದು ನಿಲ್ಲಿಸಿದ್ದಾರೆ. ಈ ವೇಳೆ ವಿದ್ಯಾರ್ಥಿನಿಯರು ನಮ್ಮನ್ನು ಕಾಲೇಜಿನ ಒಳಗೆ ಬಿಡುವಂತೆ ಆಗ್ರಹಿಸಿದರು.

ಮತ್ತೆ ಹಿಜಾಬ್ ಗದ್ದಲ: ಚಿಕ್ಕಮಗಳೂರು ಕಾಲೇಜಿನಲ್ಲಿ 25 ವಿದ್ಯಾರ್ಥಿನಿಯರಿಗೆ ತಡೆ

ನಮ್ಮ ಮನವಿಗೆ ಕಾಲೇಜು ಆಡಳಿತ ಮಂಡಳಿ ಸ್ಪಂದಿಸುತ್ತಿಲ್ಲ ಎಂದು ವಿದ್ಯಾರ್ಥಿನಿಯರು ಆರೋಪ ಮಾಡುತ್ತಿದ್ದಾರೆ. ಯಾವುದೇ ರೀತಿಯ ಅಹಿತಕರ ಘಟನೆ ನಡೆಯಬಾರದು ಎಂದು ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಆದರೆ, ವಿದ್ಯಾರ್ಥಿನಿಯರು ಮಾತ್ರ ಕಾಲೇಜಿನ ಗೇಟ್​ ಮುಂದೆಯೇ ನಿಂತು ಹೋರಾಟ ಮಾಡುತ್ತಿದ್ದಾರೆ.

ಹಿಜಾಬ್​ ಧರಿಸಲು ಅವಕಾಶ ಕೋರಿ ಹೈಕೋರ್ಟ್​ಗೆ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ನಡೆಸಿರುವ ವಿಸ್ತೃತ ಪೀಠ, ಈ ಬಗ್ಗೆ ತೀರ್ಪು ಕಾಯ್ದಿರಿಸಿದೆ.

ಓದಿ:ಗದಗ: ಗಂಡ-ಹೆಂಡತಿ ಜಗಳದಲ್ಲಿ ಮಧ್ಯೆ ಬಂದವನೇ ಹೆಣವಾದ!

Last Updated : Mar 5, 2022, 4:30 PM IST

For All Latest Updates

TAGGED:

ABOUT THE AUTHOR

...view details