ಚಿಕ್ಕಮಗಳೂರು:ಸಿಸಿಡಿ ಸಂಸ್ಥಾಪಕ ಸಿದ್ಧಾರ್ಥ್ ಅವರ ಅಂತ್ಯಸಂಸ್ಕಾರವನ್ನು ಒಕ್ಕಲಿಗ ಸಮುದಾಯದ ಸಂಪ್ರದಾಯ ದಂತೆ ಮಾಡಲಾಗುತ್ತದೆ.
ಅಂತಿಮ ದರ್ಶನ ಹಾಗೂ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ ಕೈಗೊಂಡಿದ್ದು, ಸೂಕ್ತ ಪೊಲೀಸ್ ಬಂದೋಬಸ್ತ್ ಕೂಡಾ ಮಾಡಲಾಗಿದೆ ಚಿಕನಹಳ್ಳಿಯ ಚೇತನಹಳ್ಳಿ ಎಸ್ಟೇಟ್ನಲ್ಲಿ ಸಕಲ ಸಿದ್ಧತೆಗಳು ಪೂರ್ಣಗೊಂಡಿದ್ದು, ಸಿಎಂ ಯಡಿಯೂರಪ್ಪ ಸೇರಿದಂತೆ ರಾಜಕೀಯ ನಾಯಕರು, ಆಪ್ತರು ಹಾಗೂ ಸಾರ್ವಜನಿಕರ ಸಾವಿರಾರು ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ.
ಸೂಕ್ತ ಭದ್ರತೆಗಾಗಿ ಡಿವೈಎಸ್ಪಿ ನೇತೃತ್ವದಲ್ಲಿ 200 ಪೊಲೀಸರನ್ನು ನಿಯೋಜಿಸಲಾಗಿದೆ. ಪ್ರಭಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರುತಿ ಕೂಡ ಸ್ಥಳದಲ್ಲಿ ಇದ್ದಾರೆ.
ಇನ್ನು ಮಂಗಳೂರಿನಿಂದ ನೇರವಾಗಿ ಮೃತದೇಹವನ್ನು ಚಿಕ್ಕಮಗಳೂರಿನಲ್ಲಿರುವ ಎಬಿಸಿ ಕಾಫಿ ಕ್ಯೂರಿಂಗ್ ಆವರಣಕ್ಕೆ ತರಲಾಗುತ್ತಿದೆ. ಇಲ್ಲಿ ಅಂತಿಮ ದರ್ಶನ ವ್ಯವಸ್ಥೆ ಮಾಡಲಾಗಿದೆ. ಇಲ್ಲಿನ ಜಿಲ್ಲಾ ಎಸ್ಪಿ ಹರೀಶ್ ಪಾಂಡೆ ಅಂತಿಮ ದರ್ಶನ ಸ್ಥಳವನ್ನು ಪರಿಶೀಲನೆ ನಡೆಸಿದ್ದಾರೆ.
ಉದ್ಯಮಿ ಸಿದ್ಧಾರ್ಥ್ ಅವರಿಗೆ ಗೌರವಾರ್ಥವಾಗಿ ನಗರದ ಎಲ್ಲ ಅಂಗಡಿ, ಮುಂಗ್ಗಟ್ಟುಗಳನ್ನು ಸ್ವಯಂ ಪ್ರೇರಿತವಾಗಿ ಬಂದ್ ಮಾಡಲಾಗಿದೆ. ಚಿಕ್ಕಮಗಳೂರು ಜನರ ಅಂತಿಮ ದರ್ಶನ ಮುಗಿದ ನಂತರ ನೇರವಾಗಿ ಚೇತನಹಳ್ಳಿ ಎಸ್ಟೇಟ್ನಲ್ಲಿ ಒಕ್ಕಲಿಗ ಸಂಪ್ರದಾಯದಂತೆ ಅಂತ್ಯಕ್ರಿಯೆ ನಡೆಸಲಾಗುತ್ತದೆ.