ಚಿಕ್ಕಮಗಳೂರು: ಜಿಲ್ಲೆಯ ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಹಿನ್ನೆಲೆ ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯ ಕಂಡು ಬಂದಿದೆ. ಇದೇ ಕಾರಣಕ್ಕೆ ಮೆಸ್ಕಾಂ ಸಿಬ್ಬಂದಿಯ ಮೇಲೆ ಹಲ್ಲೆ ಮಾಡಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ನಾಲ್ಕು ಜನರ ಮೇಲೆ ಎಫ್ಐಆರ್ ದಾಖಲು ಮಾಡಲಾಗಿದೆ.
ಮೂಡಿಗೆರೆ ತಾಲೂಕಿನ ಹಿರೇಬೈಲ್ನಲ್ಲಿ ಐದಾರು ಜನರು ಕೂಡಿಕೊಂಡು ಮೆಸ್ಕಾಂ ಸಿಬ್ಬಂದಿ ಹೇಮಂತ್ ಕುಮಾರ್ ಎಂಬುವವರ ಮೇಲೆ ಹಲ್ಲೆ ನಡೆಸಲಾಗಿದ್ದು, ಇದರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ಸಮರ್ಪಕವಾಗಿ ವಿದ್ಯುತ್ ನೀಡುತ್ತಿಲ್ಲ ಎಂದು ಹೇಳಿ ಸಿಬ್ಬಂದಿ ಮೇಲೆ ಹಲ್ಲೆ ಮಾಡಲಾಗಿದೆ ಎಂದು ಹೇಳಲಾಗಿದೆ.