ಕರ್ನಾಟಕ

karnataka

ETV Bharat / state

ವಿಕ್ರಾಂತ್​ ರೋಣ ಸಿನಿಮಾ ವೇಳೆ ಮಚ್ಚಿನಿಂದ ಹಲ್ಲೆ ಪ್ರಕರಣ.. ಆರೋಪಿಗಳ ಬಂಧನ - ವಿಕ್ರಾಂತ್ ರೋಣ ಸಿನಿಮಾ ವೀಕ್ಷಣೆ ವೇಳೆ ಹಲ್ಲೆ ಪ್ರಕರಣ

ಚಿಕ್ಕಮಗಳೂರು ಹಲ್ಲೆ ಪ್ರಕರಣ- ವಿಕ್ರಾಂತ್ ರೋಣ ಸಿನಿಮಾ ವೀಕ್ಷಿಸುತ್ತಿದ್ದ ವೇಳೆ ಮಾರಾಮಾರಿ- ಆರು ಜನ ಆರೋಪಿಗಳು ಅರೆಸ್ಟ್​

ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕರೆದೊಯ್ಯುತ್ತಿರುವುದು
ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕರೆದೊಯ್ಯುತ್ತಿರುವುದು

By

Published : Aug 3, 2022, 6:55 PM IST

ಚಿಕ್ಕಮಗಳೂರು:ಕಿಚ್ಚ ಸುದೀಪ್ ಅಭಿನಯದ ವಿಕ್ರಾಂತ್ ರೋಣ ಚಿತ್ರ ವೀಕ್ಷಣೆ ವೇಳೆ ನಗರದ ಮಿಲನ ಚಿತ್ರಮಂದಿರದಲ್ಲಿ ಮಾರಾಕಾಸ್ತ್ರಗಳಿಂದ ಯುವಕರು ಹೊಡೆದಾಡಿಕೊಂಡಿದ್ದರು. ಈ ಪ್ರಕರಣ ನಗರವನ್ನೇ ಬೆಚ್ಚಿ ಬೀಳಿಸಿತ್ತು. ಇದಾದ ನಾಲ್ಕು ದಿನದಲ್ಲಿ ಆರು ಜನ ಆರೋಪಿಗಳನ್ನ ಬಂಧಿಸಿರುವ ನಗರ ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು. ಆರೋಪಿಗಳನ್ನು ಕೋರ್ಟ್​ 11 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

ಜುಲೈ 28 ರಂದು ನಗರದ ಮಿಲನ ಚಿತ್ರಮಂದಿರದಲ್ಲಿ ವಿಕ್ರಾಂತ್ ರೋಣ ಸಿನಿಮಾ ವೀಕ್ಷಣೆ ವೇಳೆ 2 ಗುಂಪುಗಳ ನಡುವೆ ಮಾರಾಮಾರಿ ನಡೆದು ವಿಡಿಯೋ ವೈರಲ್ ಆಗಿತ್ತು. ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಹಾಸನ ಆಸ್ಪತ್ರೆಯಲ್ಲಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ನಂತರ ತಲೆಮರೆಸಿಕೊಂಡಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಲೆ ಮರೆಸಿಕೊಂಡಿದ್ದ ಆರೋಪಿಗಳನ್ನ ಬಂಧಿಸಿದ ಪೊಲೀಸರು

ಸಿನಿಮಾ ವೀಕ್ಷಣೆ ವೇಳೆ ಯುವಕನೋರ್ವ ಪದೇ ಪದೆ ಹೊರಗೆ ಹೋಗಿ ಬರುತ್ತಿದ್ದ. ಇದೇ ವಿಷಯವಾಗಿ ಚಿತ್ರ ಮಂದಿರದ ಒಳಗೆ ಎರಡು ಗುಂಪುಗಳ ಮಧ್ಯೆ ಸಣ್ಣ ಗಲಾಟೆಯಾಗಿತ್ತು. ಹೊರಗೆ ಬಂದವರು ಮತ್ತೆ ಗಲಾಟೆ ಮಾಡಿಕೊಂಡಿದ್ದೆರು. ಈ ವೇಳೆ ಕಾರಿನಲ್ಲಿಟ್ಟಿದ್ದ ಮಚ್ಚು, ಲಾಂಗು, ಡ್ರ್ಯಾಗರ್​ಗಳಿಂದ ಹೊಡೆದಾಡಿದ್ದರು. ಗಲಾಟೆಯಲ್ಲಿ ಭರತ್ ಹಾಗೂ ಜೀವನ್ ಎಂಬ ಇಬ್ಬರಿಗೆ ತೀವ್ರ ಗಾಯವಾಗಿದ್ದು, ಇಬ್ಬರಿಗೂ ಹಾಸನದಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.

ಬಂಧಿತ ಆರೋಪಿಗಳು ಬೆಂಗಳೂರು, ಮೈಸೂರು ಸೇರಿದಂತೆ ರಾಜ್ಯದ ನಾನಾ ಭಾಗದಲ್ಲಿ ತಲೆಮರೆಸಿಕೊಂಡಿದ್ದರು. ಆರೋಪಿಗಳ ಪತ್ತೆಗಾಗಿ ಚಿಕ್ಕಮಗಳೂರು ಡಿ.ವೈ.ಎಸ್.ಪಿ ಪುರುಷೋತ್ತಮ್ ನೇತೃತ್ವದಲ್ಲಿ 4 ತನಿಖಾ ತಂಡಗಳನ್ನು ರಚಿಸಿದ್ದರು. ಎಂಟು ಜನರಲ್ಲಿ 6 ಮಂದಿ ನೇರವಾಗಿ ಕೃತ್ಯದಲ್ಲಿ ಭಾಗಿಯಾಗಿದ್ದರು. ಇನ್ನಿಬ್ಬರು ಪರೋಕ್ಷವಾಗಿ ಸಹಕಾರ ನೀಡಿದ ಆರೋಪಿಗಳಾಗಿದ್ದಾರೆ.

ಪ್ರಕರಣದಲ್ಲಿ ಇನ್ನೂ ಮೂರ್ನಾಲ್ಕು ಜನ ಭಾಗಿಯಾಗಿರುವ ಮಾಹಿತಿ ಲಭ್ಯವಾಗಿದೆ. ಅವರನ್ನೂ ಬಂಧಿಸುವುದಾಗಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಕ್ಷಯ್ ತಿಳಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ ಸಿಪಿಐಗಳಾದ ಗುರುಪ್ರಸಾದ್, ಜಯರಾಮ್ ಸೇರಿದಂತೆ ಇಲಾಖೆಯ ಸಿಬ್ಬಂದಿ ಪಾಲ್ಗೊಂಡಿದ್ದರು.

ಓದಿ:ಸಿದ್ದರಾಮಯ್ಯ ಅಮೃತಮಹೋತ್ಸವ.. ಮಾಜಿ ಸಿಎಂಗೆ ರೇಷ್ಮೆ ಶಾಲು ಹೊದಿಸಿ ಶುಭಾಶಯ ಕೋರಿದ ಡಿಕೆಶಿ

ABOUT THE AUTHOR

...view details