ಚಿಕ್ಕಮಗಳೂರು: ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಅನುಮಾನಾಸ್ಪದ ವಸ್ತು ಪತ್ತೆ ಹಿನ್ನೆಲೆಯಲ್ಲಿ ಕಾಫಿನಾಡಿನಲ್ಲೂ ಪೊಲೀಸರು ಮುನ್ನಚ್ಚರಿಕೆವಹಿಸಿದ್ದಾರೆ.
ಕಾಫಿನಾಡಿನಲ್ಲೂ ಪೊಲೀಸರಿಂದ ಮುನ್ನೆಚ್ಚರಿಕಾ ಕ್ರಮ.. ಗಡಿಯಲ್ಲಿ ವಾಹನಗಳ ತಪಾಸಣೆ.. - ಪೊಲೀಸ್ ಕಟ್ಟೆಚ್ಚರ
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸೇರಿ ಗಡಿ ಭಾಗದಲ್ಲಿ ತೀವ್ರ ಪೊಲೀಸ್ ಕಟ್ಟೆಚ್ಚರವಹಿಸಲಾಗಿದೆ. ಕೊಟ್ಟಿಗೆಹಾರದ ಚೆಕ್ ಪೋಸ್ಟ್ನಲ್ಲಿ ಪ್ರತಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ.

ಕಾಫಿನಾಡಿನಲ್ಲಿ ಹೈ ಅಲರ್ಟ್
ಜಿಲ್ಲೆಯ ಗಡಿ ಪ್ರದೇಶದಲ್ಲಿ ವಾಹನಗಳ ತೀವ್ರ ತಪಾಸಣೆ ಮಾಡಲಾಗುತ್ತಿದೆ. ಚಿಕ್ಕಮಗಳೂರು-ದಕ್ಷಿಣ ಕನ್ನಡಕ್ಕೆ ತೆರಳುವ ವಾಹನಗಳ ಮೇಲೆ ಹಾಗೂ ಆ ಭಾಗದಿಂದ ಬರುವ ವಾಹನಗಳ ಮೇಲೆ ತೀವ್ರ ನಿಗಾ ವಹಿಸಲಾಗಿದೆ.
ಕಾಫಿನಾಡಿನಲ್ಲಿ ಹೈಅಲರ್ಟ್..
ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸೇರಿ ಗಡಿ ಭಾಗದಲ್ಲಿ ತೀವ್ರ ಪೊಲೀಸ್ ಕಟ್ಟೆಚ್ಚರವಹಿಸಲಾಗಿದೆ. ಕೊಟ್ಟಿಗೆಹಾರದ ಚೆಕ್ ಪೋಸ್ಟ್ನಲ್ಲಿ ಪ್ರತಿ ವಾಹನಗಳ ತಪಾಸಣೆ ಮಾಡಲಾಗುತ್ತಿದೆ.