ಚಿಕ್ಕಮಗಳೂರು:ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಿನಿಂದ ಸುರಿದ ಧಾರಾಕಾರ ಮಳೆಯಿಂದ, ಎಲ್ಲ ಹಳ್ಳ ಕೊಳ್ಳಗಳು, ಕೆರೆ ಕಟ್ಟೆಗಳು, ಚೆಕ್ ಡ್ಯಾಮ್ ಗಳು ಹಾಗೂ ಜಲಾಶಯಗಳು ತುಂಬಲು ಆರಂಭಿಸಿದೆ.
ಜಂಬದಹಳ್ಳ ಜಲಾಶಯ ಭರ್ತಿ: ಬಾಗಿನ ಅರ್ಪಿಸಿದ ಶಾಸಕ ಡಿ.ಎಸ್.ಸುರೇಶ್ - ಬಾಗೀನ
ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಳೆದ ಕೆಲವು ತಿಂಗಳಿಂದ ಎಡೆಬಿಡದೇ ಸುರಿದ ಮಳೆಗೆ ಜಿಲ್ಲೆಯ ಬಹುತೇಕ ನದಿ,ಹೊಳೆ, ಜಲಾಶಯಗಳು ತುಂಬಿವೆ. ಈ ಹಿನ್ನೆಲೆ ತರೀಕೆರೆ ಶಾಸಕ ಡಿ.ಎಸ್.ಸುರೇಶ್ ಭರ್ತಿಯಾಗಿರುವ ಜಂಬದಹಳ್ಳ ಜಲಾಶಯಕ್ಕೆ ಬಾಗಿನ ಅರ್ಪಿಸಿದ್ದಾರೆ.
ಜಂಬದಹಳ್ಳ ಜಲಾಶಯ ಭರ್ತಿ
ಈ ತಿಂಗಳು ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ತಾಲೂಕಿನಲ್ಲಿ ನೂರಾರು ಹೆಕ್ಟೇರ್ ಭೂಮಿಗೆ ನೀರನ್ನು ಒದಗಿಸುವ ಜಂಬದಹಳ್ಳ ಜಲಾಶಯ ತುಂಬಿದ್ದು, ಕೋಡಿ ಬೀಳುವ ಹಂತಕ್ಕೆ ತಲುಪಿದೆ. ಈ ಹಿನ್ನೆಲೆ ತರೀಕೆರೆ ಶಾಸಕ ಡಿ.ಎಸ್.ಸುರೇಶ್ ತಮ್ಮ ಕಾರ್ಯಕರ್ತರು ಹಾಗೂ ಮುಖಂಡರು, ಸ್ಥಳೀಯ ಗ್ರಾಮಸ್ಥರೊಂದಿಗೆ ಜಲಾಶಯಕ್ಕೆ ಭೇಟಿ ನೀಡಿ, ಗಂಗಾ ಪೂಜೆಯನ್ನು ಮಾಡಿ ವಿಶೇಷ ಪೂಜೆಯನ್ನು ಸಲ್ಲಿಸಿದರು.
ನಂತರ ತಮ್ಮ ಕಾರ್ಯಕರ್ತರು ಹಾಗೂ ಮುಖಂಡರ ಜೊತೆ ಸೇರಿ ಜಂಬದಹಳ್ಳ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಿ ನಮಸ್ಕರಿಸಿದರು.