ಚಿಕ್ಕಮಗಳೂರು:ಸ್ವಾತಂತ್ರ್ಯ ಬಂದಾಗಿನಿಂದ ಬಸ್ಸನ್ನೇ ಕಾಣದ ಗ್ರಾಮಕ್ಕೆ 75 ನೇ ಸ್ವಾತಂತ್ರ್ಯ ದಿನಾಚರಣೆಯ ಹೊಸ್ತಿಲಲ್ಲಿ ಬಸ್ ಸಂಚಾರ ಸೌಲಭ್ಯ ದೊರತಿದೆ. ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಹೆಗ್ಗುಡ್ಲು, ಮತ್ತಿಕಟ್ಟೆ, ದೊಡ್ಡನಂದಿ ಸೇರಿದಂತೆ ನಾಲ್ಕೈದು ಗ್ರಾಮಗಳಿಗೆ ಬಸ್ ಸೌಲಭ್ಯವೇ ಇರಲಿಲ್ಲ. ಈ ಭಾಗದಲ್ಲಿ ಸುಮಾರು 250 ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದಾರೆ.
ಚಿಕ್ಕಮಗಳೂರು: ಸ್ವಾತಂತ್ರ್ಯ ಸಿಕ್ಕಿ 75 ವರ್ಷಗಳ ನಂತರ ಗ್ರಾಮಕ್ಕೆ ಬಂತು ಬಸ್
ಬಣಕಲ್ ಹೋಬಳಿಯ ಹೆಗ್ಗುಡ್ಲು, ಮತ್ತಿಕಟ್ಟೆ, ದೊಡ್ಡನಂದಿ ಸೇರಿದಂತೆ ನಾಲ್ಕೈದು ಗ್ರಾಮಗಳಲ್ಲಿ 250 ಕ್ಕೂ ಹೆಚ್ಚು ಕುಟುಂಬಗಳು ವಾಸವಿದ್ದರೂ ಇಲ್ಲಿಯವರೆಗೆ ಬಸ್ ಸೌಲಭ್ಯ ಇರಲಿಲ್ಲ.
ಬಣಕಲ್ ಹೋಬಳಿಗೆ ಬರಲು ಗ್ರಾಮಗಳ ಜನರು ಹಾಗೂ ಶಾಲಾ-ಕಾಲೇಜು ಮಕ್ಕಳು ಕೂಡ ಸುಮಾರು 5-7 ಕಿ.ಮೀ. ಕಾಲ್ನಡಿಗೆಯಲ್ಲೇ ಬರಬೇಕಿತ್ತು. ಇದೀಗ ಸ್ಥಳೀಯರ ದಶಕಗಳ ಮನವಿ ಫಲ ನೀಡಿದೆ. ದಿನಕ್ಕೆರಡು ಬಾರಿ ಓಡಾಡುವ ಬಸ್ಸು ಬೆಳಗ್ಗೆ-ಸಂಜೆ ಈ ಹಳ್ಳಿಗಳಿಗೆ ಹೋಗಿ ಬರಲಿದೆ. ಹಳ್ಳಿಗಳಿಗೆ ತೆರಳಲು ಎರಡು ಕೋಟಿ ರೂ ವೆಚ್ಚದಲ್ಲಿ ರಸ್ತೆ ನಿರ್ಮಾಣವಾಗಿದೆ. ಇಂದು ಶಾಸಕ ಎಂ.ಪಿ.ಕುಮಾರಸ್ವಾಮಿ ಬಸ್ ಸಂಚಾರವನ್ನು ಉದ್ಘಾಟಿಸಿ, ಮತ್ತಿಕಟ್ಟೆ ಗ್ರಾಮದಿಂದ ಬಣಕಲ್‍ವರೆಗೂ ಸ್ಥಳಿಯರ ಜತೆ ಪ್ರಯಾಣಿಸಿದರು.
ಇದನ್ನೂ ಓದಿ :'ಹರ್ ಘರ್ ತಿರಂಗಾ' ಯಶಸ್ವಿಗೆ ಬಿಜೆಪಿ ಸಜ್ಜು.. 75 ಲಕ್ಷ ಮನೆಗಳ ಮೇಲೆ ತ್ರಿವರ್ಣ ಧ್ವಜಾರೋಹಣ