ಚಿಕ್ಕಮಗಳೂರು:ಜಿಲ್ಲೆಗೆ ಈ ವರ್ಷದ ಮೊದಲ ಮಳೆಯ ಸಿಂಚನವಾಗಿದೆ. ಮಲೆನಾಡು ಭಾಗದಲ್ಲಿ ಧಾರಾಕಾರ ಮಳೆ ಸುರಿಯುತ್ತಿದ್ದು, ಬಿಸಿಲ ಬೇಗೆಯಿಂದ ಬೇಸತ್ತಿದ್ದ ಜನರು ಹಾಗೂ ರೈತರು ನಿಟ್ಟುಸಿರು ಬಿಟ್ಟಿದ್ದಾರೆ.
ಚಿಕ್ಕಮಗಳೂರು: ವರ್ಷದ ಮೊದಲ ಮಳೆಯ ಸಿಂಚನ - ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ
ಮಲೆನಾಡಿನ ಶೃಂಗೇರಿ, ಕೊಪ್ಪ ಹಾಗೂ ಎನ್ಆರ್ ಪುರ ತಾಲೂಕಿನಲ್ಲಿ ಮಳೆ ಸುರಿದಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರವಾಗಿ ಸುರಿದ ಮಳೆ
ಶೃಂಗೇರಿ, ಕೊಪ್ಪ ಹಾಗೂ ಎನ್ಆರ್ ಪುರ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿದಿದ್ದು ಹುಯಿಗೆರೆ, ಖಾಂಡ್ಯ, ಮೇಲ್ಪಾಲ್, ಬಾಳೆಹೊನ್ನೂರು, ಕಟ್ಟಿನಮನೆ, ಹುಣಸೆಹಳ್ಳಿ, ಕುಂಬರಗೋಡು, ಗಡಿಗೇಶ್ವರ, ಬೆರಣಗೊಡು, ಸಿಗಸೆ ಹಾಗೂ ಚಿಕ್ಕಮಗಳೂರು ತಾಲೂಕಿನ ಹೊರ ಭಾಗದಲ್ಲೂ ಮಳೆಯಾಗುತ್ತಿದೆ.