ಚಿಕ್ಕಮಗಳೂರು:ಪಕ್ಷದ ಬೆಳವಣಿಗೆ ಹಾಗೂ ಮಗನ ರಾಜಕೀಯ ಭವಿಷ್ಯಕ್ಕಾಗಿ ರಾಜ್ಯದ ವಿವಿಧ ದೇವಸ್ಥಾನ ಸುತ್ತಿ, ಶೃಂಗೇರಿಯಲ್ಲಿ ಪೂಜೆ-ಹೋಮ-ಹವನ ನಡೆಸಿದ್ದ ಮುಖ್ಯಮಂತ್ರಿ ಕುಟುಂಬದ ಸದಸ್ಯರು ಚುನಾವಣೆ ಫಲಿತಾಂಶಕ್ಕೂ ಮುನ್ನ ಮತ್ತೊಂದು ಸುತ್ತು ಟೆಂಪಲ್ ರನ್ ಮುಂದುವರೆಸಿದ್ದಾರೆ.
ಫಲಿತಾಂಶಕ್ಕೂ ಮುನ್ನ ನಿಖಿಲ್ ಕುಮಾರಸ್ವಾಮಿ ಟೆಂಪಲ್ ರನ್ - R_Kn_Ckm_04_22_Nikil in Srungeri_Rajkumar_Ckm_pkg_7202347
ನಾಳೆ ಲೋಕಸಭಾ ಚುನಾವಣಾ ಫಲಿತಾಂಶ ಹಿನ್ನೆಲೆ ಸಿಎಂ ಪುತ್ರ ನಿಖಿಲ್ ಕುಮಾರಸ್ವಾಮಿ ಹಾಗೂ ಅನಿತಾ ಕುಮಾರಸ್ವಾಮಿ ಇಂದು ಮತ್ತೆ ಶೃಂಗೇರಿಗೆ ತೆರಳಿ ಶಾರದಾಂಬೆಗೆ ಪೂಜೆ ಸಲ್ಲಿಸಿದ್ದಾರೆ.
ಫಲಿತಾಂಶಕ್ಕೂ ಮುನ್ನ ನಿಖಿಲ್ ಕುಮಾರಸ್ವಾಮಿ ಟೆಂಪಲ್ ರನ್
ಇಂದು ಶೃಂಗೇರಿಯಲ್ಲಿ ಬೆಳಗ್ಗೆ ಶಾರದಾಂಬೆಗೆ ವಿಶೇಷ ಪೂಜೆ ಸಲ್ಲಿಸಿದ ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್ ಹಾಸನದ ಕುಲದೇವರ ಸೇರಿದಂತೆ ವಿವಿಧ ದೇವಸ್ಥಾನಕ್ಕೆ ತೆರಳಿ ಗೆಲುವಿಗಾಗಿ ವಿಶೇಷ ಪೂಜೆ ಸಲ್ಲಿಸಲಿದ್ದಾರೆ. ಆದರೇ ಅಪ್ಪನಿಗೆ ಅಧಿಕಾರ ಕೊಟ್ಟ ಶೃಂಗೇರಿ ಶಾರದಾಂಬೆ ಸನ್ನಿಧಿಯಲ್ಲಿ ಮಗನ ಗೆಲುವಿಗಾಗಿಯೂ ವಿಶೇಷ ಪೂಜೆ ಹೋಮ-ಹವನ ನಡೆಸಿದ್ದ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ಅವರ ಕುಟುಂಬ ಫಲಿತಾಂಶಕ್ಕೂ ಮುನ್ನ ಮಗನ ಗೆಲುವಿಗಾಗಿ ಮತ್ತೆ ಶಾರದಾಂಬೆ ಮೊರೆ ಹೋಗಿದ್ದಾರೆ.