ಚಿಕ್ಕಮಗಳೂರು : ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಘಟನೆ ಇಲ್ಲಿನ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದಿದೆ. ಅಮೃತ್ ಯೋಜನೆ ಹಾಗೂ ಒಳಚರಂಡಿ ಕಾಮಗಾರಿ ವಿಳಂಬ ಹಿನ್ನೆಲೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವರು, ನಿಮಗೆ ಮಾನ ಮರ್ಯಾದೆ ಇದ್ಯಾ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.
ಕಳೆದ ನವೆಂಬರ್ ತಿಂಗಳಲ್ಲಿ ಮುಗಿಯಬೇಕಿದ್ದ ಕಾಮಗಾರಿಗಳು ಇನ್ನೂ ಮುಗಿಯದ ಹಿನ್ನೆಲೆ ಕೋಪಗೊಂಡ ಸಚಿವರು ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡಿದ್ದಾರೆ. ಸಭೆಯಲ್ಲಿದ್ದ ವಿಧಾನ ಪರಿಷತ್ ಸದಸ್ಯ ಭೋಜೇಗೌಡರೂ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು.