ಚಿಕ್ಕಮಗಳೂರು: ಬೈಕ್ ಸವಾರನ ಮೇಲೆ ಕಾಡು ಕೋಣ ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ಗ್ರಾಮದಲ್ಲಿ ನಡೆದಿದೆ.
ಚಿಕ್ಕಮಗಳೂರು: ಬೈಕ್ ಸವಾರನ ಮೇಲೆ ಕಾಡು ಕೋಣ ದಾಳಿ, ಗಂಭೀರ ಗಾಯ - Chikmagalur
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮತ್ತಿಕಟ್ಟೆ ಗ್ರಾಮದಲ್ಲಿ ಬೈಕ್ ಸವಾರನ ಮೇಲೆ ಕಾಡು ಕೋಣ ದಾಳಿ ಮಾಡಿದ್ದು, ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಬೈಕ್ ಸವಾರನ ಮೇಲೆ ಕಾಡು ಕೋಣ ದಾಳಿ: ಗಂಭೀರ ಗಾಯ
ಗ್ರಾಮದ ಅರುಣ್ ಎಂಬಾತ ಮತ್ತಿ ಕಟ್ಟೆ ಗ್ರಾಮದಲ್ಲಿ ತನ್ನ ಸ್ನೇಹಿತನ ಮನೆಗೆ ಹೋಗಿ ಬೈಕ್ನಲ್ಲಿ ವಾಪಸ್ ಬರುತ್ತಿದ್ದ ವೇಳೆ ಏಕಾ ಏಕೀ ಬಂದ ಕಾಡು ಕೋಣ ದಾಳಿ ಮಾಡಿದೆ ಎನ್ನಲಾಗಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡಿರುವ ಈತನನ್ನು ಸ್ಥಳೀಯರು ಬಣಕಲ್ ಆಸ್ವತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಅಲ್ಲದೇ ದಾಳಿಯಿಂದ ಬೈಕ್ ಕೂಡ ಜಖಂ ಆಗಿದೆ ಎಂದು ತಿಳಿದು ಬಂದಿದೆ.
ಇನ್ನು ಸ್ಥಳಕ್ಕೆ ಮೂಡಿಗೆರೆ ಅರಣ್ಯಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.