ಚಿಕ್ಕಮಗಳೂರು: ಜಿಲ್ಲಾ ಸಹಕಾರಿ ಬ್ಯಾಂಕ್ ಚುನಾವಣೆ ಫಲಿತಾಂಶ ಹೊರ ಬಿದ್ದಿದೆ. ಬ್ಯಾಂಕ್ನ ಒಟ್ಟು 13 ಸ್ಥಾನಗಳ ಪೈಕಿ ಬಿಜೆಪಿ ಬೆಂಬಲಿತ 11 ಅಭ್ಯರ್ಥಿಗಳು ಗೆಲ್ಲುವ ಮೂಲಕ ಬ್ಯಾಂಕಿನ ಅಧಿಕಾರದ ಚುಕ್ಕಾಣಿ ಹಿಡಿದಿದ್ದಾರೆ.
ಚಿಕ್ಕಮಗಳೂರು: ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಗೆದ್ದ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳು - BJP candidates won
ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಎಸ್ಎಲ್ ಬೋಜೇಗೌಡ ಈ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಕಳೆದ ಬಾರಿ ಜೆಡಿಎಸ್ ಪಕ್ಷ ಡಿಸಿಸಿ ಬ್ಯಾಂಕ್ನ ಗದ್ದುಗೆಯನ್ನು ಹಿಡಿದಿತ್ತು. ಈ ಬಾರಿ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡು ಮುಖಭಂಗ ಅನುಭವಿಸಿದೆ.

ಡಿಸಿಸಿ ಬ್ಯಾಂಕ್ ಚುನಾವಣೆ
ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯ ಎಸ್ಎಲ್ ಬೋಜೇಗೌಡ ಈ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ಕಳೆದ ಬಾರಿ ಜೆಡಿಎಸ್ ಪಕ್ಷ ಜಿಲ್ಲಾ ಡಿಸಿಸಿ ಬ್ಯಾಂಕ್ನ ಗದ್ದುಗೆಯನ್ನು ಹಿಡಿದಿತ್ತು. ಈ ಬಾರಿ ಚುನಾವಣೆಯಲ್ಲಿ ಅಧಿಕಾರ ಕಳೆದುಕೊಂಡು ಮುಖಭಂಗ ಅನುಭವಿಸಿದೆ.
ಬಿಜೆಪಿ ಕಾರ್ಯಕರ್ತರು ಆಶೀರ್ವಾದ ವೃತ್ತದಲ್ಲಿ ಸಂಭ್ರಮಾಚರಣೆ
ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ ರವಿಗೆ ಡಿಸಿಸಿ ಬ್ಯಾಂಕ್ ಚುನಾವಣೆ ಪ್ರತಿಷ್ಠೆಯಾಗಿತ್ತು. ಒಟ್ಟು 13 ಸ್ಥಾನಗಳ ಪೈಕಿ 11 ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಈ ಮೂಲಕ ಬಿಜೆಪಿ ಕಾರ್ಯಕರ್ತರು ಆಶೀರ್ವಾದ ವೃತ್ತದಲ್ಲಿ ಸಂಭ್ರಮಾಚರಣೆ ಮಾಡಿದರು.