ಚಿಕ್ಕಮಗಳೂರು: ಬಿಜೆಪಿ ಸರ್ಕಾರ ಬಂದಿರುವುದೇ ಆಪರೇಷನ್ ಮೂಲಕ. ನಮ್ಮ ಶಾಸಕರನ್ನು ಸೆಳೆಯುವುದರ ಮೂಲಕ ಅವರು ಸರ್ಕಾರ ರಚನೆ ಮಾಡಿದ್ದಾರೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಆರೋಪಿಸಿದ್ದಾರೆ.
ಮೂಡಿಗೆರೆ ತಾಲೂಕಿನ ಹಾಂದಿ ಗ್ರಾಮದಲ್ಲಿರುವ ಶಾಲಿಮರ್ ಕನ್ವೆಂಷನ್ ಹಾಲ್ನಲ್ಲಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆದ್ದ ಪ್ರತಿಯೊಬ್ಬರಿಗೂ ಸನ್ಮಾನಿಸಿ ಗೌರವಿಸಲಾಯಿತು. ನಂತರ ಮಾತನಾಡಿದ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ, ಬಿಜೆಪಿ ಸರ್ಕಾರ ಬಂದಿರುವುದೇ ಆಪರೇಷನ್ ಮೂಲಕ. ನಮ್ಮ ಶಾಸಕರನ್ನು ಸೆಳೆಯುವುದರ ಮೂಲಕ ಅವರು ಸರ್ಕಾರ ರಚನೆ ಮಾಡಿದ್ದಾರೆ. ಅದೇ ರೀತಿಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರನ್ನು ಸೆಳೆಯುವುದರ ಮೂಲಕ ಪಂಚಾಯಿತಿಗಳನ್ನು ಹಿಡಿಯುವ ಕೆಲಸ ಬಿಜೆಪಿ ಪಕ್ಷ ಮಾಡುತ್ತಿದೆ ಎಂದು ಆರೋಪಿಸಿದರು.