ಚಿಕ್ಕಮಗಳೂರು:ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ.ರವಿ ಅನಾರೋಗ್ಯದಿಂದ ತಡರಾತ್ರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಮಧ್ಯರಾತ್ರಿ ಆರೋಗ್ಯದಲ್ಲಿ ಏರುಪೇರಾದ ಕಾರಣ ನಗರದ ಆಶ್ರಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅನಾರೋಗ್ಯ: ಮತ್ತೆ ಆಸ್ಪತ್ರೆಗೆ ದಾಖಲಾದ ಸಿ.ಟಿ.ರವಿ - BJP MLA CT Ravi
ಅನಾರೋಗ್ಯ ಕಾರಣದಿಂದ ತಡರಾತ್ರಿ ಶಾಸಕ ಸಿ.ಟಿ.ರವಿ ಚಿಕ್ಕಮಗಳೂರು ನಗರದ ಆಶ್ರಯ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಸಿ.ಟಿ.ರವಿ ಅವರಿಗೆ ಕಿಡ್ನಿಯಲ್ಲಿ ಕಲ್ಲು ಕಾಣಿಸಿಕೊಂಡಿತ್ತು. ಕಳೆದ 15 ದಿನಗಳ ಹಿಂದೆಯೂ ಆಸ್ಪತ್ರೆ ಸೇರಿದ್ದ ಅವರು, ಲಿಂಗಾಯತ ಸಮಾವೇಶಕ್ಕೂ ಗೈರಾಗಿದ್ದರು. ವಿಡಿಯೋ ಕಾಲ್ ಮೂಲಕ ಮತಯಾಚನೆ ಮಾಡಿದ್ದರು. ಚುನಾವಣೆ ಮುಗಿಯುತ್ತಿದ್ದಂತೆ ಚಿಕಿತ್ಸೆಗಾಗಿ ಮತ್ತೆ ಆಸ್ಪತ್ರೆ ಸೇರಿದ್ದಾರೆ. ಅಲ್ಲದೇ, ಈ ಹಿಂದೆ ಪಡೆದ ಚಿಕಿತ್ಸೆ ವೇಳೆ ಸ್ಟಂಟ್ ಮೂಲಕ ಕಿಡ್ನಿಯಲ್ಲಿನ ಕಲ್ಲಿನ ಸಮಸ್ಯೆ ನಿವಾರಣೆ ಮಾಡಲಾಗಿತ್ತು. ಆದರೆ, ಕಿಡ್ನಿಗೆ ಹಾಕಿದ್ದ ಸ್ಟಂಟ್ ಸ್ವಲ್ಪ ಜರುಗಿರುವ ಹಿನ್ನೆಲೆ ಮತ್ತೆ ಹೊಟ್ಟೆ ನೋವು ಕಾಣಿಸಿಕೊಂಡಿದೆ ಎಂದು ತಿಳಿದು ಬಂದಿದೆ. ಈ ಕಾರಣದಿಂದ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದು, ಸಂಜೆ ವೇಳೆಗೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ.
ಇದನ್ನೂ ಓದಿ:ಮುಗಿದ ಚುನಾವಣೆ ತಲೆಬಿಸಿ: ರಿಲಾಕ್ಸ್ ಮೂಡ್ನಲ್ಲಿ ನಾಯಕರು, ಆಪ್ತರೊಂದಿಗೆ ಚಹಾಕೂಟ