ಚಿಕ್ಕಮಗಳೂರು:ಮೂಡಿಗೆರೆ ಶಾಸಕ ಕುಮಾರಸ್ವಾಮಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಚಿಕ್ಕಮಗಳೂರಿನಲ್ಲಿ ಸವಾಲು ಹಾಕಿದ್ದಾರೆ. ನಾನು ಸಚಿವನಾಗಿದ್ದಾಗ ಅತೀ ಹೆಚ್ಚು ಅನುದಾನ ಕೊಟ್ಟಿರುವುದು ಮೂಡಿಗೆರೆಗೆ. ಅತಿ ಹೆಚ್ಚು ಅನುದಾನ ಹೋಗದಿದ್ರೆ ನಾನು ರಾಜೀನಾಮೆ ಕೊಡ್ತೀನಿ ಎಂದು ಶಾಸಕ ಎಂ.ಪಿ. ಕುಮಾರಸ್ವಾಮಿಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸವಾಲು ಹಾಕಿದ್ದಾರೆ.
ಕುಮಾರಸ್ವಾಮಿ ಮನಸ್ಸಲ್ಲಿ ಏನೋ ಇಟ್ಕೊಂಡು, ಏನೋ ಮಾತನಾಡ್ತಿದ್ದಾರೆ. ಕುಮಾರಸ್ವಾಮಿ ಮೊದಲು ತಮ್ಮ ಕ್ಷೇತ್ರದ ವ್ಯಾಪ್ತಿಯನ್ನ ತಿಳಿದುಕೊಳ್ಳಲಿ. ನಾನು ಸಚಿವನಾಗಿದ್ದ ವೇಳೆ ಮೂಡಿಗೆರೆ ಕ್ಷೇತ್ರಕ್ಕೆ ಸಾಕಷ್ಟು ಅನುದಾನ ನೀಡಿದ್ದೇನೆ ಎಂದಿದ್ದಾರೆ.