ಚಿಕ್ಕಮಗಳೂರು: ಲಂಚ ಪಡೆಯುವ ವೇಳೆ ಕಂದಾಯ ನಿರೀಕ್ಷಕನ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ಮೂಡಿಗೆರೆ ತಾಲೂಕಿನ ಜಾವಳಿಯಲ್ಲಿ ರೆವಿನ್ಯೂ ಇನ್ಸ್ಪೆಕ್ಟರ್ (ಆರ್ಐ) ಮಹೇಶ್ ಎಂಬುವವರು ಜಾವಳಿ ಸಮೀಪದ ತಲಗೂರಿನ ಫಾರೂಕ್ ಎಂಬುವವರಿಂದ 8 ಸಾವಿರ ರೂ. ಲಂಚ ಪಡೆಯುವ ವೇಳೆ ಎಸಿಬಿ ಅಧಿಕಾರಿಗಳ ಕೈಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ.