ಕರ್ನಾಟಕ

karnataka

ETV Bharat / state

ಕಾಫಿನಾಡಿನತ್ತ ಪ್ರವಾಸಿಗರ ದಂಡು; ಕೈಮರ ಚೆಕ್​ಪೋಸ್ಟ್​ನಲ್ಲಿ ಟ್ರಾಫಿಕ್​ ಜಾಮ್​ - R_Kn_Ckm_02_23_kaimara Traffic jam_Rajkumar_Ckm_av_7202347

ನಿನ್ನೆ ಮತ್ತು ಇವತ್ತು ಶಾಲಾ ಕಾಲೇಜುಗಳಿಗೆ ರಜೆ ಇರುವ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿರುವ ಹಿನ್ನೆಲೆಯಲ್ಲಿ, ಕೈಮರ ಚೆಕ್ ಪೋಸ್ಟ್​ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ನೂರಾರು ಸಂಖ್ಯೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ.

ಕಾಫಿನಾಡಿನತ್ತ ಪ್ರವಾಸಿಗರ ದಂಡು...ಕೈಮರ ಚೆಕ್​ಪೋಸ್ಟ್​ನಲ್ಲಿ ಟ್ರಾಫಿಕ್​ ಜಾಮ್​

By

Published : Jun 23, 2019, 3:22 PM IST


ಚಿಕ್ಕಮಗಳೂರು:ಎರಡು ದಿನಗಳ ಕಾಲ ಶಾಲಾ ಕಾಲೇಜುಗಳಿಗೆ ರಜೆ ಇರುವ ಹಿನ್ನೆಲೆ, ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸಂಖ್ಯೆ ಹೆಚ್ಚಿದ್ದು, ಚಿಕ್ಕಮಗಳೂರು ತಾಲೂಕಿನ ಕೈಮರ ಚೆಕ್ ಪೋಸ್ಟ್‌ನಲ್ಲಿ ಫುಲ್ ಟ್ರಾಫಿಕ್ ಜಾಮ್ ಉಂಟಾಗಿದೆ.

ಕಾಫಿನಾಡಿನತ್ತ ಪ್ರವಾಸಿಗರ ದಂಡು...ಕೈಮರ ಚೆಕ್​ಪೋಸ್ಟ್​ನಲ್ಲಿ ಟ್ರಾಫಿಕ್​ ಜಾಮ್​

ನಿನ್ನೆ ಮತ್ತು ಇವತ್ತು ಶಾಲಾ ಕಾಲೇಜುಗಳಿಗೆ ರಜೆ ಇರುವ ಕಾರಣ, ಚಿಕ್ಕಮಗಳೂರು ಜಿಲ್ಲೆಗೆ ಪ್ರವಾಸಿಗರ ದಂಡೇ ಹರಿದು ಬರುತ್ತಿದೆ. ಸಾವಿರಾರೂ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಿದ್ದು ನಗರ ಪ್ರವಾಸಿಗರಿಂದ ತುಂಬಿ ತುಳುಕುತ್ತಿದೆ. ಜಿಲ್ಲೆಯ ಕೈಮರ ಚೆಕ್‌ಪೋಸ್ಟ್​ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು, ನೂರಾರು ಸಂಖ್ಯೆಯಲ್ಲಿ ವಾಹನಗಳು ಸಾಲುಗಟ್ಟಿ ನಿಂತಿವೆ. ಮುಳ್ಳಯ್ಯನಗಿರಿ, ಕವಿಕಲ್ ಗಂಡಿ, ಹೊನ್ನಮ್ಮನ ಹಳ್ಳ, ದತ್ತಪೀಠದ ಮಾರ್ಗದಲ್ಲಿ ಸುಮಾರು ಒಂದು ಕಿ.ಮೀನಷ್ಟು ದೂರ ವಾಹನಗಳು ನಿಂತಲ್ಲೇ ನಿಂತುಕೊಂಡಿವೆ. ಟ್ರಾಫಿಕ್ ಜಾಮ್ ನಿಂದ ಪ್ರವಾಸಿಗರು ಹೈರಾಣಾಗಿದ್ದು, ಸ್ಥಳೀಯರು ಕೂಡ ಪರದಾಡುವಂತಹ ಪರಿಸ್ಥಿತಿ ಉಂಟಾಗಿದೆ.

ಇದರ ಜೊತೆಗೆ ಧಾರಾಕಾರ ಮಳೆಯೂ ಸುರಿಯುತ್ತಿದೆ. ಟ್ರಾಫಿಕ್ ಕ್ಲಿಯರ್ ಮಾಡಲು ಪೊಲೀಸರ ಹರಸಾಹಸಪಡುತ್ತಿದ್ದಾರೆ.

For All Latest Updates

TAGGED:

ABOUT THE AUTHOR

...view details