ಕರ್ನಾಟಕ

karnataka

ETV Bharat / state

ನಿಯಂತ್ರ ತಪ್ಪಿ ಕಾಫಿ ತೋಟಕ್ಕೆ ನುಗ್ಗಿದ ಬಸ್​​​​... ಇಲ್ಲಿ ಆದ ಅನಾಹುತ ಎಂಥಾದ್ದು! - bus

ಮಲೆನಾಡು ಭಾಗದಲ್ಲಿ ನಿರಂತರ ಸುರಿತ್ತಿರುವ ಮಳೆಯಿಂದ ಮಂಜು ಮುಸುಕಿದ ವಾತಾವರಣದಿಂದಾಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಕಾಫೀ ತೋಟದೊಳಗೆ ನುಗ್ಗಿದೆ

bus

By

Published : Jul 23, 2019, 12:52 PM IST

Updated : Jul 23, 2019, 2:54 PM IST

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ ಕಾಫೀ ತೋಟದೊಳಗೆ ನುಗ್ಗಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಮೇಲಪಾಲ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಕೊಪ್ಪ ತಾಲೂಕಿನಿಂದ ಮೇಲಪಾಲ್ ಗ್ರಾಮಕ್ಕೆ ಪ್ರಯಾಣಿಕರನ್ನು ಕರೆದೊಯ್ಯೂವ ವೇಳೆ ಸಹಕಾರ ಸಾರಿಗೆ ಬಸ್ ಚಾಲಕನ ನಿಯಂತ್ರಣ ತಪ್ಪಿ ಕಾಫಿ ತೋಟಕ್ಕೆ ನುಗ್ಗಿದೆ.

ತೋಟಕ್ಕೆ ನುಗ್ಗಿರುವ ಬಸ್

ಈ ಬಸ್​​ನಲ್ಲಿ ಸಾಕಷ್ಟು ಜನ ಪ್ರಯಾಣಿಕರು ಪ್ರಯಾಣ ಮಾಡುತ್ತಿದ್ದು, ಅದೃಷ್ಟವಾಶತ್ ಖಾಸಗಿ ಬಸ್​ನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆ ಆಗದೇ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಮಲೆನಾಡು ಭಾಗದಲ್ಲಿ ನಿರಂತರ ಸುರಿತ್ತಿರುವ ಮಳೆಯಿಂದ ಮಂಜು ಮುಸುಕಿದ ವಾತಾವರಣದಿಂದಾಗಿ ಬಸ್ ಸಂಚಾರಕ್ಕೆ ಅಡಚಣೆಯಾಗುತ್ತಿದ್ದು, ಇಂತಹ ಅನಾಹುತಕ್ಕೆ ಕಾರಣವಾಗಿದ್ದು ಬಾಳೆಹೊನ್ನೂರು ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Last Updated : Jul 23, 2019, 2:54 PM IST

ABOUT THE AUTHOR

...view details