ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಧಾರಾಕಾರವಾಗಿ ಮಳೆಯಾಗುತ್ತಿದ್ದು, ಜಿಲ್ಲೆಯಲ್ಲಿರುವ ಕೆರೆ ಕಟ್ಟೆಗಳು ತುಂಬಿ ಹರಿಯಲು ಆರಂಭಿಸಿವೆ.
ಹಿರೇಕೊಳಲೆ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಸಿ.ಟಿ.ರವಿ - ಹಿರೇಕೊಳಲೆ ಕೆರೆಗೆ ಬಾಗಿನ ಅರ್ಪಿಸಿದ ಸಚಿವ ಸಿ. ಟಿ. ರವಿ
ಚಿಕ್ಕಮಗಳೂರಿನ ಐತಿಹಾಸಿಕ ಹಿರೇಕೊಳಲೆ ಕೆರೆಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹಾಗೂ ಅವರ ಪತ್ನಿ ಪಲ್ಲವಿ ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಸೇರಿದಂತೆ ಇತರ ಮುಖಂಡರು ಬಾಗಿನ ಅರ್ಪಣೆ ಮಾಡಿದ್ದಾರೆ.
ಹಿರೇಕೊಳಲೆ ಕೆರೆಗೆ ಬಾಗಿನವನ್ನು ಅರ್ಪಿಸಿದ ಸಚಿವ ಸಿ. ಟಿ. ರವಿ
ಚಿಕ್ಕಮಗಳೂರಿನ ಐತಿಹಾಸಿಕ ಹಿರೇಕೊಳಲೆ ಕೆರೆ ತುಂಬಿ ಹರಿಯುತ್ತಿದ್ದು, ಕೆರೆ ಕೋಡಿ ಬಿದ್ದಿದೆ. ಈ ಹಿನ್ನೆಲೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ.ರವಿ ಹಾಗೂ ಅವರ ಪತ್ನಿ ಪಲ್ಲವಿ ಸಿ.ಟಿ.ರವಿ, ವಿಧಾನ ಪರಿಷತ್ ಸದಸ್ಯ ಎಸ್.ಎಲ್.ಭೋಜೇಗೌಡ ಹಾಗೂ ಇತರ ಮುಖಂಡರು ಹಿರೇಕೊಳಲೆ ಕೆರೆಗೆ ಭೇಟಿ ನೀಡಿ, ವಿಶೇಷ ಪೂಜೆ ಸಲ್ಲಿಸಿ ಬಾಗಿನ ಅರ್ಪಣೆ ಮಾಡಿದ್ದಾರೆ.
ಗಿರಿ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಹಿರೇಕೊಳಲೆ ಕೆರೆ ತುಂಬಿ ಹರಿಯುತ್ತಿದ್ದು, ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಅಲ್ಲದೆ ಈ ಕೆರೆ ಚಿಕ್ಕಮಗಳೂರು ನಗರಕ್ಕೆ ಕುಡಿಯುವ ನೀರನ್ನು ಒದಗಿಸುವ ಪ್ರಮುಖ ಕೆರೆಯಾಗಿದೆ.