ಚಿಕ್ಕಮಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪ್ರವಾಸೋದ್ಯಮ ನೀತಿಗೆ ಪೂರಕವಾಗಿ, ಜೂನ್ ಅಂತ್ಯದ ಒಳಗೆ ಜಿಲ್ಲೆಯ ಪ್ರವಾಸೋದ್ಯಮ ಅಭಿವೃದ್ಧಿಗೆ ಸಂಬಂಧಿಸಿದ ನಿಯಮಗಳನ್ನು ರೂಪಿಸಲಾಗುವುದು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ ಟಿ ರವಿ ಹೇಳಿದ್ದಾರೆ.
ಈ ಕುರಿತು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಅಧಿಕಾರಿಗಳು ಹಾಗೂ ಪರಿಸರವಾದಿಗಳ ಜೊತೆ ಚರ್ಚೆ ನಡೆಸಿದ ಸಿ ಟಿ ರವಿ, ಕೊರೊನಾ ವೈರಸ್ನಿಂದ ಅನೇಕ ವಲಯಗಳು ನಷ್ಟ ಅನುಭವಿಸಿದ್ದು, ಅದರಲ್ಲಿ ಪ್ರವಾಸೋದ್ಯಮ ಇಲಾಖೆಯು ಒಂದಾಗಿದೆ. ಇದರ ಅಭಿವೃದ್ಧಿಗಾಗಿ ರಾಜ್ಯದಲ್ಲಿ ಪ್ರವಾಸೋದ್ಯಮ ನೀತಿಗಳನ್ನು ಜಾರಿಗೆ ತರುವ ಅವಶ್ಯಕತೆ ಇದ್ದು, ನಮ್ಮ ರಾಜ್ಯ ಹಲವು ವೈವಿಧ್ಯತೆಗೆ ಹೆಸರಾಗಿದೆ. ಪ್ರವಾಸೋದ್ಯಮ ಬೆಳವಣಿಗೆಯ ನಿಟ್ಟಿನಲ್ಲಿ, ಕಳೆದ ಕೆಲ ತಿಂಗಳಿನಿಂದ ಪ್ರವಾಸೋದ್ಯಮ ಕರಡು ರೂಪಿಸಲಾಗುತ್ತಿದೆ. ಜೂನ್ ಅಂತ್ಯದೊಳಗೆ ರಾಜ್ಯದಲ್ಲಿ ಇದು ಜಾರಿಗೆ ಬರಲಿದೆ ಎಂದರು.