ಚಿಕ್ಕಮಗಳೂರು:ಸಚಿವ ಸಂಪುಟ ವಿಸ್ತರಣೆ ಆಗುತ್ತಿರುವ ಹಿನ್ನೆಲೆ, ಜಿಲ್ಲೆಯಿಂದ ಸಚಿವ ಸ್ಥಾನಕ್ಕಾಗಿ ಲಾಬಿ ಪ್ರಾರಂಭವಾಗಿದೆ. ಮೂಡಿಗೆರೆ ತಾಲೂಕಿನ ಶಾಸಕ ಎಂಪಿ ಕುಮಾರಸ್ವಾಮಿ ದಿಢೀರ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರನ್ನು ಭೇಟಿಯಾಗಿ ಈ ಕುರಿತು ಮಾತಕತೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸುತ್ತಿವೆ.
ಸಚಿವ ಸಂಪುಟ ವಿಸ್ತರಣೆ ವಿಚಾರ: ಕಟೀಲ್ ಭೇಟಿಯಾದ ಮೂಡಿಗೆರೆ ಶಾಸಕ - ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀ
ಇಂದು ಮಂಗಳೂರಿಗೆ ಹೋದ ಶಾಸಕ ಎಂಪಿ ಕುಮಾರಸ್ವಾಮಿ, ಕಟೀಲ್ ಅವರನ್ನು ಭೇಟಿಯಾಗಿ ಸುದೀರ್ಘವಾಗಿ ಸಚಿವ ಸ್ಥಾನದ ಕುರಿತು ಚರ್ಚೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಾರಿಯಾದರೂ ನನಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಮಾಡಿದ್ದಾರೆ ಎನ್ನಲಾಗಿದೆ.
ಕಟೀಲ್ರನ್ನು ಭೇಟಿಯಾದ ಮೂಡಿಗೆರೆ ಶಾಸಕ
ಇಂದು ಮಂಗಳೂರಿಗೆ ಹೋದ ಶಾಸಕ ಎಂಪಿ ಕುಮಾರಸ್ವಾಮಿ, ಕಟೀಲ್ ಅವರನ್ನು ಭೇಟಿಯಾಗಿ ಸುದೀರ್ಘವಾಗಿ ಸಚಿವ ಸ್ಥಾನದ ಕುರಿತು ಚರ್ಚೆ ಮಾಡಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಬಾರಿಯಾದರೂ ನನಗೆ ಮಂತ್ರಿ ಸ್ಥಾನ ನೀಡಬೇಕು ಎಂದು ಕುಮಾರಸ್ವಾಮಿ ಅವರು ಮನವಿ ಸಲ್ಲಿಸಿದ್ದಾರೆ ಎನ್ನಲಾಗಿದೆ.
ಈ ವೇಳೆ, ಮೂಡಿಗೆರೆ ಬಿಜೆಪಿ ತಾಲೂಕು ಅಧ್ಯಕ್ಷ ರಘು ಸೇರಿ ಹಲವರು ಇವರಿಗೆ ಸಾಥ್ ನೀಡಿದ್ದಾರೆ. ಆದರೆ ಮುಂದಿನ ದಿನಗಳಲ್ಲಿ ಇವರಿಗೆ ಸಚಿವ ಸ್ಥಾನ ಸಿಗುತ್ತಾ ಎಂಬುದನ್ನು ಕಾದು ನೋಡಬೇಕಿದೆ.