ಕರ್ನಾಟಕ

karnataka

ETV Bharat / state

ಕರುವಿಗೆ ಡಿಕ್ಕಿ ಹೊಡೆಯೋದನ್ನು ತಪ್ಪಿಸಲು ಹೋಗಿ ದುರಂತ: ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯ! - ಕಾರು ಅಪಘಾತ

ಕರುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಗದ್ದೆಗೆ ಕಾರು ಉರುಳಿ ಬಿದ್ದಿದೆ. ಸ್ಥಳದಲ್ಲೇ ಕರು ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿವೆ.

car accident
ಕಾರು ಅಪಘಾತ

By

Published : Apr 13, 2021, 2:02 PM IST

ಚಿಕ್ಕಮಗಳೂರು: ಕರುವಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಗದ್ದೆಗೆ ಕಾರು ಉರುಳಿ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ. ಘಟನೆಯಲ್ಲಿ ಸ್ಥಳದಲ್ಲೇ ಕರು ಸಾವನ್ನಪ್ಪಿದ್ದು, ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯವಾಗಿದೆ.

ಕಾರು ಅಪಘಾತ

ಚಿಕ್ಕಮಗಳೂರು ಜಿಲ್ಲೆಯ, ಮೂಡಿಗೆರೆ ತಾಲೂಕಿನ ಹೆಬ್ಬರಿಗೆ ಗ್ರಾಮದ ಸಮೀಪ‌ ಈ ಘಟನೆ ನಡೆದಿದ್ದು, ಹೊಸದುರ್ಗದಿಂದ ಧರ್ಮಸ್ಥಳಕ್ಕೆ ಪ್ರಯಾಣಿಸುತ್ತಿದ್ದ ಕಾರಿನವರಿಂದ ಈ ಘಟನೆ ನಡೆದಿದೆ. ಕಾರಿನಲ್ಲಿದ್ದ ಕೃಷ್ಣಮೂರ್ತಿ, ವೀಣಾ ಹಾಗೂ ಚಾಲಕನಿಗೆ ಗಂಭೀರ ಗಾಯವಾಗಿದ್ದು, ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ:ನೋಡ ನೋಡುತ್ತಲೇ ಸಂಪ್​ಗೆ ಬಿದ್ದ ಮಗು - ವಿಡಿಯೋ ವೈರಲ್​

ಬಣಕಲ್ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details